Home Crime ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಮೂರನೇ ಬಾರಿಗೆ ಗಡಿಪಾರು ಆದೇಶ…!!

ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಮೂರನೇ ಬಾರಿಗೆ ಗಡಿಪಾರು ಆದೇಶ…!!

ಬೆಳ್ತಂಗಡಿ : ರೌಡಿಶೀಟ‌ರ್ ಅಗಿರುವ ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಮೂರನೇ ಬಾರಿಗೆ ಗಡಿಪಾರು ಆದೇಶ ಹೊರಡಿಸಲಾಗಿದೆ.

ಬೆಳ್ತಂಗಡಿ ತಾಲೂಕಿನ ಉಜಿರೆಯ ರೌಡಿಶೀಟರ್ ಅಗಿರುವ ಮಹೇಶ್ ಶೆಟ್ಟಿ ತಿಮರೋಡಿಯನ್ನು ಹೈಕೋರ್ಟ್ ಆದೇಶದಂತೆ ಮಾ.16 ರಂದು (16-03-2026 ರಿಂದ 16-09-2026 ) ಪುತ್ತೂರು ಎಸಿ ಸ್ಟೈಲ್ಲಾ ವರ್ಗಿಸ್ ಅವರು ಆರು ತಿಂಗಳು ಕಾಲ ರಾಯಚೂರು ಜಿಲ್ಲೆಯ ಮಾನ್ಯ ತಾಲೂಕಿಗೆ ಗಡಿಪಾರು ಮಾಡಿ ಆದೇಶ ಹೊರಡಿಸಿದ್ದಾರೆ.

ಪುತ್ತೂರು ಎ.ಸಿ ಗಡಿಪಾರು ಆದೇಶದಂತೆ ಬೆಳ್ತಂಗಡಿ ಉಪವಿಭಾಗ ಡಿವೈಎಸ್ಪಿ ರೋಹಿನಿ. ಸಿ. ಕೆ ಅವರ ನೇತೃತ್ವದಲ್ಲಿ ಪೊಲೀಸರು ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ಮನೆಗೆ ಮಾ.16 ರಂದು ಮದ್ಯರಾತ್ರಿ ಹೋಗಿ ಗಡಿಪಾರು ಆದೇಶ ಪ್ರತಿಯನ್ನು ಜಾರಿ ಮಾಡಲು ಹೋದಾಗ ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿರದೆ ನಾಪತ್ತೆಯಾಗಿದ್ದರು. ಬಳಿಕ ಮನೆಯ ಗೋಡೆಗೆ ನೋಟಿಸ್‌ ಅಂಟಿಸಿದ್ದಾರೆ.