Home Crime ವಿದ್ಯುತ್ ಕಂಬ ಬಿದ್ದು ವ್ಯಕ್ತಿ ಮೃತ್ಯು : ಪ್ರಕರಣ ದಾಖಲು…!!

ವಿದ್ಯುತ್ ಕಂಬ ಬಿದ್ದು ವ್ಯಕ್ತಿ ಮೃತ್ಯು : ಪ್ರಕರಣ ದಾಖಲು…!!

ಬೆಳ್ತಂಗಡಿ: ತಾಲೂಕಿನ ಕೊಕ್ಕಡ ಗ್ರಾಮದ ಬಳಿ ವಿದ್ಯುತ್ ಕಂಬವನ್ನು ಎತ್ತುವ ವೇಳೆ ಸಂಭವಿಸಿದ ದುರಂತದಲ್ಲಿ ಕಾರ್ಮಿಕನೋರ್ವ ಮೃತಪಟ್ಟಿರುವ ಘಟನೆ ನಡೆದಿದೆ.

ಪ್ರಕರಣದ ದೂರುದಾರರಾದ ಬೆಳ್ತಂಗಡಿ ಕೊಕ್ಕಡ ನಿವಾಸಿ ರಂಜಿತ್ ಅವರ ಚಿಕ್ಕಪ್ಪ ಮೃತ ಶಿವಪ್ಪ (40) ಅವರು ಕಳೆದ ಸುಮಾರು 6 ವರ್ಷಗಳಿಂದ ಕೊಕ್ಕಡ ನಿವಾಸಿ ಪುರುಷೋತ್ತಮ ಅವರ ಎಲೆಕ್ಟ್ರಿಕಲ್ಸ್ ಅಂಗಡಿಯಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದರು.

ದಿನಾಂಕ ಮಾರ್ಚ್ 16 ರಂದು ಸಂಜೆ ಕೊಕ್ಕಡ ಶ್ರೀರಾಮ ಭಜನಾ ಮಂದಿರದ ಬಳಿ ವಿದ್ಯುತ್ ಕಂಬವನ್ನು ಎತ್ತುವ ವೇಳೆ, ಅಗತ್ಯ ಭದ್ರತಾ ಪರಿಕರಗಳನ್ನು ಒದಗಿಸದೇ ಹಾಗೂ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳದೇ ಇದ್ದ ಕಾರಣ ಕಂಬವು ಶಿವಪ್ಪ ಅವರ ಮೇಲೆ ಬಿದ್ದಿದೆ.

ಇದರಿಂದ ಗಂಭೀರವಾಗಿ ಗಾಯಗೊಂಡ ಶಿವಪ್ಪ ಅವರು ಮೃತಪಟ್ಟಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ.ಕ್ರ. 20/2026, ಕಲಂ 106 ಬಿಎನ್‌ಎಸ್‌ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.