ಮೂಡುಬಿದಿರೆ : ಕಾರ್ಕಳ-ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿಯ ಬೆಳುವಾಯಿ ಸಮೀಪ ಕೆಎಸ್‌ಆರ್‌ಟಿಸಿ ಬಸ್ಸೊoದು ಗೂಡ್ಸ್ ಮಿನಿ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಟೆಂಪೋ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ಬಂಟ್ವಾಳ ತಾಲೂಕು ಕೆಲಿಂಜೆ ನಿವಾಸಿ ಲೆಸ್ಮರ್ ಡೇವಿಡ್ ಡಿ’ಸೋಜ (30 ) ಮೃತಪಟ್ಟವರು.
ಮೂಡುಬಿದಿರೆಯಿಂದ ಕಾರ್ಕಳ ಕಡೆಗೆ ಸಾಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ವಿರುದ್ಧ ದಿಕ್ಕಿನಲ್ಲಿ ಬಂದು ಕಾರ್ಕಳ ಕಡೆಯಿಂದ ಮೂಡುಬಿದಿರೆ ಕಡೆಗೆ ಬರುತ್ತಿದ್ದ ಮಿನಿ ಗೂಡ್ಸ್ ಟೆಂಪೋಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಟೆಂಪೋ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.




