ಉಡುಪಿ : ಇಂದಿನಿಂದ ಕರ್ನಾಟಕದಾದ್ಯಂತ 10 ನೇ ತರಗತಿಯ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ಆರಂಭವಾಗಿದೆ. ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಕುಮಾರ್ ಶೆಟ್ಟಿ ಬಣದ ಉಡುಪಿ ಜಿಲ್ಲಾ ಮಹಿಳಾ ಘಟಕದ ವತಿಯಿಂದ 10 ನೇ ತರಗತಿಯ ಪರೀಕ್ಷೆಗೆ ಹಾಜರಾದ ಮಕ್ಕಳಿಗೆ ಗುಲಾಬಿ ಹೂ ಮತ್ತು ಪೆನ್ ಕೊಟ್ಟು ಧೈರ್ಯ ತುಂಬುವ ಕಾರ್ಯಕ್ರಮವನ್ನು ಉಡುಪಿ ಬೋರ್ಡ್ ಹೈಸ್ಕೂಲ್ ಆವರಣದಲ್ಲಿ ಆಯೋಜಿಸಲಾಯಿತು.
ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಗೌರವಾಧ್ಯಕ್ಷರಾದ ಅನ್ಸಾರ್ ಅಹಮದ್ ಮಾತನಾಡಿ “ಪ್ರತಿಯೊಬ್ಬ ವ್ಯಕ್ತಿಯ ವಿದ್ಯಾರ್ಥಿ ಜೀವನದಲ್ಲಿ 10 ನೇ ತರಗತಿಯ ಪರೀಕ್ಷೆಯ ಕಾಲಘಟ್ಟ ಬಹಳ ಮಹತ್ವದ್ದು. ಅದು ಮನುಷ್ಯ ತನ್ನ ಜೀವನ ರೂಪಿಸಿಕೊಳ್ಳಲು ಮಹತ್ವದ ಪಾತ್ರ ವಹಿಸುತ್ತವೆ. ಹಾಗಾಗಿ ಈ ದಿನ ಪರೀಕ್ಷೆಯಲ್ಲಿ ಹಾಜರಾಗುವ ಪ್ರತಿಯೊಬ್ಬ ವಿದ್ಯಾರ್ಥಿಗೂ ಗುಲಾಬಿ ಹೂ ಮತ್ತು ಪೆನ್ ನೀಡಿ ಧೈರ್ಯದಿಂದ ಪರೀಕ್ಷೆಯನ್ನು ಎದುರಿಸಿ ನಿಮಗೆಲ್ಲರಿಗೂ ಶುಭವಾಗಲಿ ಎಂದು ಹಾರೈಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ” ಎಂದರು
ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಉಡುಪಿ ಜಿಲ್ಲಾ ಮಹಿಳಾ ಘಟಕದ ಜಿಲ್ಲಾಧ್ಯಕ್ಷರಾದ ಜ್ಯೋತಿ ಶೇರಿಗಾರ್ತಿ, ಉಪಾಧ್ಯಕ್ಷರಾದ ದೇವಕಿ ಬಾರ್ಕೂರು, ಜಿಲ್ಲಾ ಘಟಕದ ಉಪಾಧ್ಯಕ್ಷರಾದ ಅಫೋನ್ಸೊ ಮೆನೆಜಸ್,ಹಾಗೂ ಸಂಘಟನೆಯ ಪ್ರಮುಖರಾದ ನಾಗರಾಜ, ವಿಠಲ, ಸಂತೋಷ, ಪಾಂಡು, ಸಿದ್ದು ರವರು ಉಪಸ್ಥಿತರಿದ್ದರು.








