ಮಂಗಳೂರು: ಗಾಂಜಾ ಸೇವನೆ ಮಾಡಿದ ಸ್ಥಿತಿಯಲ್ಲಿ ಸಾರ್ವಜನಿಕ ರಸ್ತೆಯಲ್ಲಿ ಕಂಡುಬಂದ ಯುವಕನನ್ನು ಬಜ್ಪೆ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ ಘಟನೆ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬಜ್ಪೆ ಪೊಲೀಸ್ ಠಾಣೆಯ ಪಿಎಸ್‌ಐ ಅಶೋಕ್ ಅವರು ಸಿಬ್ಬಂದಿಗಳೊಂದಿಗೆ ದಿನಾಂಕ 16-03-2026 ರಂದು ಮಧ್ಯಾಹ್ನ ಸುಮಾರು 3 ಗಂಟೆ ವೇಳೆಗೆ ಠಾಣಾ ವ್ಯಾಪ್ತಿಯಲ್ಲಿ ರೌಂಡ್ಸ್ ಕರ್ತವ್ಯದಲ್ಲಿದ್ದರು. ಈ ವೇಳೆ ಮಂಗಳೂರು ತಾಲೂಕು ಕೆಂಜಾರು ಗ್ರಾಮದ ಅಂಬೇಡ್ಕರ್ ನಗರ ಬಳಿ ಸಾರ್ವಜನಿಕ ರಸ್ತೆಯಲ್ಲಿ ಯುವಕನೊಬ್ಬ ಅಮಲು ಪದಾರ್ಥ ಸೇವಿಸಿ ನಶೆಯಲ್ಲಿದ್ದಂತೆ ಕಂಡುಬಂದಿದ್ದಾನೆ.
ತಕ್ಷಣ ಪೊಲೀಸರು ವಾಹನ ನಿಲ್ಲಿಸಿ ಯುವಕನನ್ನು ವಿಚಾರಿಸಿದಾಗ ಆತ ಸಮರ್ಪಕವಾಗಿ ಉತ್ತರಿಸದೇ ಇದ್ದನು. ಬಳಿಕ ಕೂಲಂಕುಷವಾಗಿ ವಿಚಾರಿಸಿದಾಗ ಗಾಂಜಾ ಸೇವನೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ.
ಆತನನ್ನು ಹೆಸರು ವಿಳಾಸ ವಿಚಾರಿಸಿದಾಗ ಆತಿಕ್ ರೆಹಮಾನ್ (26), ತಂದೆ ಮೊಹಮ್ಮದ್ ಶರೀಫ್, ಡೋರ್ ನಂ.1-69, ಬದ್ರಿಯಾ ಮಸೀದಿ ಸಮೀಪ, ಅಂಬೇಡ್ಕರ್ ನಗರ, ಪೇಜಾವರ ಅಂಚೆ, ಕೆಂಜಾರು ಗ್ರಾಮ ನಿವಾಸಿ ಎಂದು ತಿಳಿಸಿದ್ದಾನೆ.
ನಂತರ ಪೊಲೀಸರು ಆತನನ್ನು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಮಂಗಳೂರಿನ ಎ.ಜೆ. ಆಸ್ಪತ್ರೆಗೆ ಕರೆದೊಯ್ದರು. ಅಲ್ಲಿ ವೈದ್ಯಾಧಿಕಾರಿಗಳು ಪರೀಕ್ಷಿಸಿದಾಗ ಆತಿಕ್ ರೆಹಮಾನ್ ಅವರು ಗಾಂಜಾ ಸೇವನೆ ಮಾಡಿರುವುದಾಗಿ ವೈದ್ಯಕೀಯ ದೃಢೀಕರಣ ನೀಡಿರುವುದಾಗಿ ತಿಳಿದುಬಂದಿದೆ.
ಈ ಹಿನ್ನೆಲೆಯಲ್ಲಿ ಆರೋಪಿ ಆತಿಕ್ ರೆಹಮಾನ್ ವಿರುದ್ಧ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.



