Home Crime ಉಡುಪಿ : ಸಂತಕಟ್ಟೆ ಬಳಿ ಕಾರು–ಬಸ್ ಭೀಕರ ಢಿಕ್ಕಿ : ಕಾರಿನಲ್ಲಿದ್ದವರಿಗೆ ಗಂಭೀರ ಗಾಯ…!!

ಉಡುಪಿ : ಸಂತಕಟ್ಟೆ ಬಳಿ ಕಾರು–ಬಸ್ ಭೀಕರ ಢಿಕ್ಕಿ : ಕಾರಿನಲ್ಲಿದ್ದವರಿಗೆ ಗಂಭೀರ ಗಾಯ…!!

ಉಡುಪಿ, ಮಾ.18: ಉಡುಪಿಯ ಸಂತಕಟ್ಟೆ ಬಳಿ ಇಂದು ಭೀಕರ ರಸ್ತೆ ಅಪಘಾತ ಸಂಭವಿಸಿದೆ.

ಬಲೆನೊ ಕಾರು ಮತ್ತು ಎಕ್ಸ್‌ಪ್ರೆಸ್ ಬಸ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಜಗದೀಶ್ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಅಂಡರ್‌ಪಾಸ್ ನಿರ್ಮಾಣ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಇಲ್ಲಿ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗಿತ್ತು.

ಇದೇ ವೇಳೆ ತಪ್ಪು ದಾರಿಯಲ್ಲಿ ಚಲಿಸುತ್ತಿದ್ದ ಬಲೆನೊ ಕಾರು, ಇನ್ನೊಂದು ಕಾರನ್ನು ಓವರ್‌ಟೇಕ್ ಮಾಡಲು ಯತ್ನಿಸುವಾಗ ಎದುರು ಬರುತ್ತಿದ್ದ ಎಕ್ಸ್‌ಪ್ರೆಸ್ ಬಸ್‌ಗೆ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ತೀವ್ರತೆಗೆ ಬಲೆನೊ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ಗಾಯಾಳುಗಳನ್ನು ಸ್ಥಳೀಯರ ಸಹಾಯದಿಂದ ಸಮೀಪದ ಆಸ್ಪತ್ರೆಗೆ ಸಾಗಿಸಲಾಗಿದೆ.

ಬಸ್‌ನಲ್ಲಿದ್ದ ಕೆಲ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.