ವಿಷ ಸೇವಿಸಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು…!!
ಕಾರ್ಕಳ : ವಿಷ ಸೇವಿಸಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ ಘಟನೆ ನೂರಾಲ್ ಬೆಟ್ಟು ಗ್ರಾಮದ ಮುಳ್ಳಿಕಾರಿನಲ್ಲಿ ನಡೆದಿದೆ.
ಮೃತರನ್ನು ಪ್ರಶಾಂತ್ (37) ಎಂದು ತಿಳಿಯಲಾಗಿದೆ.
ಪ್ರಶಾಂತ್ ಅವರು ಕೂಲಿ ಕೆಲಸ ಮಾಡಿಕೊಂಡಿದ್ದು, ಜೂ. 23ರಂದು ಬೆಳಗ್ಗೆ ಮನೆಯಿಂದ ಕೆಲಸಕ್ಕೆ ಹೋದವರು ಮಧ್ಯಾಹ್ನ 3:30ಕ್ಕೆ ಅವರ ದೊಡ್ಡಪ್ಪನ ಮಗ ಸುರೇಶ್ ಅವರಿಗೆ ಫೋನ್ ಮಾಡಿ, ತಾನು ವಿಷ ಸೇವಿಸಿದ್ದು, ಮಾಳ ಚೌಕಿಯಲ್ಲಿರುವುದಾಗಿ ತಿಳಿಸಿದ್ದಾರೆ.
ಪ್ರಶಾಂತ್ ಅವರ ಅಣ್ಣ ದಿನೇಶ್ ಮತ್ತು ಸುರೇಶ್ ಮಾಳ ಚೌಕಿಯಲ್ಲಿ ಹುಡುಕಾಡಿದಾಗ ಹಾಡಿಯಲ್ಲಿ ಅಸ್ವಸ್ಥ ಸ್ಥಿತಿಯಲ್ಲಿ ಪ್ರಶಾಂತ್ ಸಿಕ್ಕಿರುತ್ತಾರೆ. ತಕ್ಷಣವೇ ಅವರನ್ನು ಚಿಕಿತ್ಸೆಗಾಗಿ ನಿಟ್ಟೆ ಗಾಜ್ರಿಯಾ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಬಳಿಕ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿ ಆದರ್ಶ ಆಸ್ಪತ್ರೆಗೆ ದಾಖಲಿಸಿದ್ದು ನಂತರ ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿರುತ್ತದೆ.
ಚಿಕಿತ್ಸೆಗೆ ಸ್ಪಂದಿಸದೆ ಸಂಜೆ ಪ್ರಶಾಂತ್ ಮೃತಪಟ್ಟಿರುತ್ತಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.