ಮಂಗಳೂರು: ಅಪ್ರಾಪ್ತ ಬಾಲಕನನ್ನು ಹಣ ಮತ್ತು ತಿಂಡಿ ನೀಡುವ ನೆಪದಲ್ಲಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ ಶಾಕಿಂಗ್ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ.
ಮಾರ್ಚ್ 18, 2026ರಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು, 9 ವರ್ಷದ ಬಾಲಕನಿಗೆ ಅಶ್ಲೀಲ ವಿಡಿಯೋ ತೋರಿಸಿ ಅಸಭ್ಯ ಕ್ರಿಯೆಗಳಿಗೆ ಪ್ರೇರೇಪಿಸಿರುವುದು ತನಿಖೆಯಲ್ಲಿ ಬಹಿರಂಗವಾಗಿದೆ.
ಈ ಸಂಬಂಧ ಕೊಣಾಜೆ ಪೊಲೀಸ್ ಠಾಣೆಯಲ್ಲಿ POCSO ಕಾಯ್ದೆಯ ಸೆಕ್ಷನ್ 4, 6, 12 ಹಾಗೂ BNS ಕಾಯ್ದೆಯ ಸೆಕ್ಷನ್ 75 ಅಡಿಯಲ್ಲಿ ಪ್ರಕರಣ ದಾಖಲಿಸಿ, ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಬಂಧಿತ ಆರೋಪಿಯನ್ನು ಆಶೀಶ್ ಪೂಜಾರಿ (33) ಎಂದು ಗುರುತಿಸಲಾಗಿದ್ದು, ಆತ ಬಿಜೈ ಪ್ರದೇಶದ MSC ಲಾಜಿಸ್ಟಿಕ್ಸ್ ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದಾನೆ ಎಂದು ತಿಳಿದುಬಂದಿದೆ. ಪ್ರಕರಣದ ಮುಂದಿನ ತನಿಖೆಯನ್ನು ಪೊಲೀಸರು ಮುಂದುವರಿಸಿದ್ದಾರೆ.



