Home Crime ಮೂಡುಬಿದಿರೆ: ಕೋಳಿ ಅಂಕದ ಮೇಲೆ ಪೊಲೀಸ್ ದಾಳಿ – 6 ಮಂದಿ ವಶಕ್ಕೆ…!

ಮೂಡುಬಿದಿರೆ: ಕೋಳಿ ಅಂಕದ ಮೇಲೆ ಪೊಲೀಸ್ ದಾಳಿ – 6 ಮಂದಿ ವಶಕ್ಕೆ…!

ಮೂಡುಬಿದಿರೆ : ಅಕ್ರಮವಾಗಿ ಕೋಳಿ ಅಂಕ ನಡೆಸುತ್ತಿದ್ದ ಸ್ಥಳದ ಮೇಲೆ ಪೊಲೀಸರು ದಾಳಿ ನಡೆಸಿ ಆರು ಮಂದಿಯನ್ನು ವಶಕ್ಕೆ ಪಡೆದ ಘಟನೆ ಮೂಡುಬಿದಿರೆ ತಾಲೂಕಿನ ಮೂಡುಮೂರ್ನಾಡು ಗ್ರಾಮದ ಹೊಯಿಪಾಲಬೆಟ್ಟು ಪ್ರದೇಶದಲ್ಲಿ ನಡೆದಿದೆ.

ಸಂಜೆ ಸುಮಾರು 4:30 ಗಂಟೆ ವೇಳೆಗೆ ಮೂಡುಬಿದಿರೆ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕಿ ಪ್ರತಿಭ ಕೆ.ಸಿ ಅವರು ರೌಂಡ್ಸ್ ಕರ್ತವ್ಯದಲ್ಲಿರುವಾಗ, ಹೊಯಿಪಾಲಬೆಟ್ಟು ಪ್ರದೇಶದಲ್ಲಿ ಕೆಲವರು ಸೇರಿಕೊಂಡು ಕೋಳಿಗಳಿಗೆ ಹರಿತವಾದ ಬಾಳ್‌ಗಳನ್ನು ಕಟ್ಟಿ ಹಿಂಸಾತ್ಮಕವಾಗಿ ಕಾದಾಡಿಸಿ ಹಣವನ್ನು ಪಣವಾಗಿಟ್ಟು ಕೋಳಿ ಅಂಕ ನಡೆಸುತ್ತಿದ್ದಾರೆ ಎಂಬ ಖಚಿತ ಮಾಹಿತಿ ಬಾತ್ಮಿದಾರರಿಂದ ಲಭಿಸಿತು.

ಈ ಮಾಹಿತಿ ಆಧಾರವಾಗಿ ಸಂಜೆ ಸುಮಾರು 5:05 ಗಂಟೆಗೆ ಸಿಬ್ಬಂದಿಗಳು ಹಾಗೂ ಪಂಚರೊಂದಿಗೆ ಸ್ಥಳಕ್ಕೆ ದಾಳಿ ನಡೆಸಿದ ಪೊಲೀಸರು ಸುನಿಲ್, ಆನಂದ, ವರುಣ ಪೂಜಾರಿ, ಅಶ್ವಥ್, ಸುದೀಪ್ ಮತ್ತು ಯೋಗೀಶ್ ಎಂಬ ಆರು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.

ದಾಳಿಯ ವೇಳೆ ಕೋಳಿ ಅಂಕಕ್ಕೆ ಬಳಸುತ್ತಿದ್ದ 17 ಹುಂಜಗಳು, ರೂ.1480 ನಗದು ಹಾಗೂ ಎರಡು ಬಾಳ್‌ಗಳನ್ನು ಮಹಜರು ಮುಖೇನ ಸ್ವಾಧೀನಪಡಿಸಿಕೊಳ್ಳಲಾಗಿದೆ.

ಈ ಸಂಬಂಧ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.