ಉಡುಪಿ: ಕರಾವಳಿ ಬೈಪಾಸ್ ಸಮೀಪ ಇರುವ ಉಡುಪಿ ಉತ್ಸವ ನಡೆಯುವ ಮೈದಾನದಲ್ಲಿ ಶುಕ್ರವಾರ ರಾತ್ರಿ ಅಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ.
ಮಾಹಿತಿಯ ಪ್ರಕಾರ, ಮೈದಾನದ ಒಣಗಿದ ಹುಲ್ಲು ಹಾಗೂ ಪೊದೆಗಳಿಗೆ ಬೆಂಕಿ ತಗುಲಿ ಸುಮಾರು 2 ಎಕರೆ ಪ್ರದೇಶಕ್ಕೆ ಅಗ್ನಿ ವ್ಯಾಪಿಸಿದೆ. ಬೆಂಕಿ ವೇಗವಾಗಿ ಹಬ್ಬುತ್ತಿದ್ದರಿಂದ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು
ಘಟನಾ ಸ್ಥಳಕ್ಕೆ ಆಗಮಿಸಿದ ಒಂದು ಅಗ್ನಿಶಾಮಕ ದಳದ ವಾಹನ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದು, ಬೆಂಕಿಯನ್ನು ನಿಯಂತ್ರಣಕ್ಕೆ ತರಲು ಸಿಬ್ಬಂದಿ ನಿರಂತರವಾಗಿ ಕಾರ್ಯಾಚರಣೆ ನಡೆಸಿದರು
ಬೆಂಕಿ ಕಾಣಿಸಿಕೊಳ್ಳಲು ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ಸ್ಥಳೀಯರು ಹಾಗೂ ಸಾರ್ವಜನಿಕರು ಸ್ಥಳಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸೇರಿಕೊಂಡಿದ್ದು, ಪರಿಸ್ಥಿತಿಯನ್ನು ನಿಯಂತ್ರಣದಲ್ಲಿಡಲು ಕ್ರಮ ಕೈಗೊಳ್ಳಲಾಗಿದೆ.
ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ





