ನೆಲಮಂಗಲ: ಕುಣಿಗಲ್ ಬೈಪಾಸ್ ಬಳಿ ಕಾರು ಹಾಗೂ ಕ್ಯಾಂಟರ್ ನಡುವೆ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಕುಣಿಗಲ್ ಬೈಪಾಸ್‌ಲ್ಲಿರುವ ಉಗಿಬಂಡಿ ರೆಸ್ಟೋರೆಂಟ್ ಬಳಿ ನೆಡೆದಿದೆ.
ಮಾಗಡಿ ತಾಲೂಕಿನ ಯಲಗಲವಾಡಿ ಹ್ಯಾಂಡ್ ಪೋಸ್ಟ್ ನಿವಾಸಿ ಸೀಬೇಗೌಡ, ಪತ್ನಿ ಮತ್ತು ಇಬ್ಬರು ಮಕ್ಕಳು ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ಯುಟರ್ನ್ ತೆಗೆದುಕೊಳ್ಳುವ ವೇಳೆ ಕಾರಿಗೆ ಕ್ಯಾಂಟರ್ ವಾಹನ ಡಿಕ್ಕಿ ಹೊಡೆದ ರಭಸಕ್ಕೆ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಕುಣಿಗಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನೆಡೆಸಿದ್ದು, ಸದ್ಯ ಮೃತದೇಹಗಳು ಕುಣಿಗಲ್ ತಾಲ್ಲೂಕು ಆಸ್ಪತ್ರೆಯ ಶವಗಾರಕ್ಕೆ ರವಾನಿಸಲಾಗಿದೆ.
