Home Crime ಕಾರ್ಕಳ : ಕೌಟುಂಬಿಕ ಕಲಹ : ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ…!!

ಕಾರ್ಕಳ : ಕೌಟುಂಬಿಕ ಕಲಹ : ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ…!!

ಕಾರ್ಕಳ : ಕೌಟುಂಬಿಕ ಕಲಹ ಹಾಗೂ ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಅಜೆಕಾರು ಪೊಲೀಸ್ ಠಾಣಾ ವ್ಯಾಪ್ತಿಯ ಎಳ್ಳಾರೆ ಎಂಬಲ್ಲಿ ನಡೆದಿದೆ.

ಎಳ್ಳಾರೆ ಗ್ರಾಮದ ಬಾಬಯ್ಯಬೆಟ್ಟು ನಿವಾಸಿ ನವೀನ್ ನಾಯ್ಕ್(38) ಎಂಬವರು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.

ದಂಪತಿ ನಡುವೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ನವೀನ್ ಸಾಕಷ್ಟು ನೊಂದಿದ್ದರು ಎನ್ನಲಾಗಿದೆ. ಇದೇ ಕಾರಣದಿಂದ ಅವರ ಆರೋಗ್ಯ ಕೆಟ್ಟಿದ್ದು,ಇದೇ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ