ಕೋಟ: ಉಡುಪಿ ಜಿಲ್ಲೆಯ ಕೋಟ ಸಮೀಪ ವೈಯಕ್ತಿಕ ಕಾರಣದಿಂದ ಮನನೊಂದು ಬ್ಯಾಂಕ್ ಉದ್ಯೋಗಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಆತ್ಮಹತ್ಯೆ ಒಳಗಾದವರು ಮೊಳಹಳ್ಳಿ ಗ್ರಾಮದ ನಿವಾಸಿ, ಉಡುಪಿ ಎಚ್‌ಡಿಎಫ್‌ಸಿ ಬ್ಯಾಂಕ್ ಉದ್ಯೋಗಿ ಗುರುಪ್ರಸಾದ್(30) ಎಂದು ತಿಳಿದು ಬಂದಿದೆ.
ಇವರು ರಾತ್ರಿ ವೇಳೆ ಮನೆಯ ಕೋಣೆಯ ಪಕಾಸಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಘಟನೆ ಸ್ಥಳಕ್ಕೆ ಕೋಟ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.