Home Crime ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಕಾರು : ಕೂದಲೆಳೆ ಅಂತರದಲ್ಲಿ ಪಾರಾದ ಪ್ರಯಾಣಿಕರು…!!

ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಕಾರು : ಕೂದಲೆಳೆ ಅಂತರದಲ್ಲಿ ಪಾರಾದ ಪ್ರಯಾಣಿಕರು…!!

ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಡಿವೈಡರ್ ಮೇಲೆರಿ ಮಗುಚಿ ಬಿದ್ದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಸೇತುವೆ ಬಳಿ ಇಂದು ಸಂಭವಿಸಿದೆ.

ಉಡುಪಿಯತ್ತ ತೆರಳುತ್ತಿದ್ದ ಕಾರಿನಲ್ಲಿ ಮಹಿಳೆ ಮತ್ತು ಇಬ್ಬರೂ ಮಕ್ಕಳು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾಪು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಕೆಲಕಾಲ ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು. ಘಟನಾ ಸ್ಥಳಕ್ಕೆ ಕಾಪು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು. ವಾಹನ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.