ಹಾಸನ: ಜೂಜಾಡುವ ವೇಳೆ ಪೊಲೀಸರು ದಾಳಿ ನಡೆಸಿದ್ದು, ಪೊಲೀಸರಿಂದ ತಪ್ಪಿಸಿಕೊಂಡು ಓಡುವ ವೇಳೆ ಆಯತಪ್ಪಿ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಅರಸೀಕೆರೆ ತಾಲ್ಲೂಕಿನ ಅರೆಕೆರೆ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಪ್ರವೀಣ್ (34) ಎಂದು ಗುರುತಿಸಲಾಗಿದೆ.
ಯುಗಾದಿ ಹಬ್ಬ ಹಿನ್ನೆಲೆಯಲ್ಲಿ ಪಕ್ಕದ ತಾವರೆಹಳ್ಳಿ ನಿರ್ಜನ ಪ್ರದೇಶದಲ್ಲಿ ಯುವಕರ ಗುಂಪು ಜೂಜಾಡುತ್ತಿದ್ದರು. ಜೂಜಾಟದ ವಿಷಯ ತಿಳಿದು ಜಾವಗಲ್ ಪೊಲೀಸರು ದಾಳಿ ಮಾಡಿದ್ದಾರೆ.
ಈ ವೇಳೆ ಸ್ಥಳದಿಂದ ತಪ್ಪಿಸಿಕೊಳ್ಳಲು ಜೂಜಾಡುತ್ತಿದ್ದ ಯುವಕರು ಓಡಿದ್ದಾರೆ. ಮೂರ್ಛೆ ರೋಗದಿಂದ ಬಳಲುತ್ತಿದ್ದ ಪ್ರವೀಣ್ ಓಡುವ ವೇಳೆ ಆಯತಪ್ಪಿ ಬಿದ್ದು ಸಾವನ್ನಪ್ಪಿದ್ದಾನೆ ಎಂದು ಶಂಕಿಸಿಲಾಗಿದೆ.





