Home Crime ಬಂಟ್ವಾಳ: ಲಾರಿ-ದ್ವಿಚಕ್ರ ವಾಹನ ನಡುವೆ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು…!!

ಬಂಟ್ವಾಳ: ಲಾರಿ-ದ್ವಿಚಕ್ರ ವಾಹನ ನಡುವೆ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು…!!

ಬಂಟ್ವಾಳ: ಲಾರಿ ಮತ್ತು ದ್ವಿಚಕ್ರ ವಾಹನದ ನಡುವೆ ನಡೆದ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಬಿ.ಸಿರೋಡಿನ ಅಜ್ಜಿಬೆಟ್ಟು ಕ್ರಾಸ್‌ನಲ್ಲಿ ನಡೆದಿದೆ.

ಮೃತಪಟ್ಟ ವ್ಯಕ್ತಿಯನ್ನು ಶಂಭೂರು ಕೊಪ್ಪಳ ನಿವಾಸಿ ಚಿದಾನಂದ (50) ಎಂದು ಗುರುತಿಸಲಾಗಿದೆ.

ಸ್ಕೂಟರ್ ಸವಾರ ಚಿದಾನಂದ ಅವರು ಬಿ.ಸಿರೋಡು ಪೇಟೆಯಿಂದ ಅಜ್ಜಿಬೆಟ್ಟು ಕ್ರಾಸ್‌ನಲ್ಲಿ ಕ್ರಾಸ್ ಮಾಡುವ ವೇಳೆ ಬಿ.ಸಿರೋಡಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಟ್ಯಾಂಕರ್ ಲಾರಿ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಚಕ್ರದಡಿ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬಂಟ್ವಾಳ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಿಬ್ಬಂದಿಯಾಗಿರುವ ಇವರಿಗೆ ಒಂದು ಹೆಣ್ಣು ಮತ್ತು ಗಂಡು ಮಗುವಿದೆ. ಪತ್ನಿ ಶಂಭೂರು ಶಾಲೆಯಲ್ಲಿ ಅತಿಥಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.