ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕರಂಬಾರು ಗ್ರಾಮದಲ್ಲಿ ಈಜಲು ಹೋದ ಯುವಕನೊಬ್ಬ ನೀರಿನ ಸೆಳೆತಕ್ಕೆ ಸಿಲುಕಿ ಆಕಸ್ಮಿಕವಾಗಿ ಮೃತಪಟ್ಟ ಘಟನೆ ನಡೆದಿದೆ.
ಮೃತ ಯುವಕ ಕುವೆಟ್ಟು ಗ್ರಾಮದ ಸುಣ್ಣತ್‌ಕೆರೆ ನಿವಾಸಿ ಇರ್ಫಾನ್ (19) ಎಂದು ತಿಳಿದು ಬಂದಿದೆ.
ಶನಿವಾರ ಸಂಜೆ ಸುಮಾರು 4 ಗಂಟೆಯ ವೇಳೆಗೆ ಇರ್ಫಾನ್ ಕರಂಬಾರು ಗ್ರಾಮದ ಕೇಳ್ಕರ ಮಹಾಲಿಂಗೇಶ್ವರ ದೇವಸ್ಥಾನದ ಬಳಿ ಹರಿಯುವ ನದಿಗೆ ಈಜಲು ತೆರಳಿದ್ದನು ಎಂದು ತಿಳಿದು ಬಂದಿದೆ.
ಈ ಸಂದರ್ಭ ನೀರಿನ ಸೆಳೆತ ಹೆಚ್ಚಿದ್ದರಿಂದ ನಿಯಂತ್ರಣ ತಪ್ಪಿ ನೀರಿನಲ್ಲಿ ಮುಳುಗಿದ್ದಾನೆ ಎಂದು ತಿಳಿದು ಬಂದಿದೆ.
ಇರ್ಫಾನ್ ನೀರಿನಲ್ಲಿ ಮುಳುಗುತ್ತಿರುವುದನ್ನು ಗಮನಿಸಿದ ಕೂಡಲೇ ಸ್ಥಳೀಯ ಯುವಕರು ತಕ್ಷಣ ಕಾರ್ಯಪ್ರವೃತ್ತರಾಗಿ ಆತನನ್ನು ನೀರಿನಿಂದ ಹೊರತೆಗೆದಿದ್ದಾರೆ ಎಂದು ತಿಳಿದು ಬಂದಿದೆ.
ಬಳಿಕ ಗಂಭೀರ ಸ್ಥಿತಿಯಲ್ಲಿದ್ದ ಇರ್ಫಾನ್‌ನನ್ನು ಚಿಕಿತ್ಸೆಗಾಗಿ ಉಜಿರೆಯ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ, ಆಸ್ಪತ್ರೆಗೆ ತಲುಪುವಷ್ಟರಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಇರ್ಫಾನ್ ಮೃತಪಟ್ಟಿದ್ದಾನೆ ಎಂದು ತಿಳಿಯಲಾಗಿದೆ.





