ಕಾರ್ಕಳ: ಅನೇಕ ಧಾರ್ಮಿಕ ಹಾಗೂ ಸಾಮಾಜಿಕ ಕಾರ್ಯಗಳಲ್ಲಿ ಗುರುತಿಸಿಕೊಂಡ ಕಾರ್ಕಳ ತಾಲೂಕಿನ ಬೋಳ ಗ್ರಾಮದ ‘ಕುಸಲ್ದ ಜವನೆರ್ ಬೋಳ’ ಇದರ 2026-27ನೇ ಸಾಲಿನ ಅಧ್ಯಕ್ಷರಾಗಿ ಶರತ್ ಶೆಟ್ಟಿ ಬೋಳ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಸಂಘದ ಪ್ರಕಟಣೆಯಲ್ಲಿ ತಿಳಿಸಿದೆ.
ಉಪಾಧ್ಯಕ್ಷರಾಗಿ ಅನ್ವಿತ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿಯಾಗಿ ನಿಶಾಂತ್ ಪೂಜಾರಿ, ಕೋಶಾಧಿಕಾರಿಯಾಗಿ ಲತೀಶ್ ಶೆಟ್ಟಿ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಕೀರ್ತನ್, ಕ್ರೀಡಾ ಕಾರ್ಯದರ್ಶಿಯಾಗಿ ಪ್ರಶಾಂತ್ ಆಯ್ಕೆಯಾಗಿದ್ದಾರೆ.





