Home Crime ತಲಪಾಡಿಯಲ್ಲಿ ಮಾದಕ ವಸ್ತು ಸೇವಿಸಿ ಸಾರ್ವಜನಿಕರಿಗೆ ತೊಂದರೆ : ಯುವಕ ಪೊಲೀಸ್ ವಶಕ್ಕೆ…!!

ತಲಪಾಡಿಯಲ್ಲಿ ಮಾದಕ ವಸ್ತು ಸೇವಿಸಿ ಸಾರ್ವಜನಿಕರಿಗೆ ತೊಂದರೆ : ಯುವಕ ಪೊಲೀಸ್ ವಶಕ್ಕೆ…!!

ಉಳ್ಳಾಲ: ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವಿಸಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ಯುವಕನನ್ನು ಉಳ್ಳಾಲ ಪೊಲೀಸರು ವಶಕ್ಕೆ ಪಡೆದ ಘಟನೆ ತಲಪಾಡಿ ಗ್ರಾಮದಲ್ಲಿ ನಡೆದಿದೆ.

ದಿನಾಂಕ 20-03-2026 ರಂದು ಸಂಜೆ ಸುಮಾರು 5:30 ಗಂಟೆಯ ವೇಳೆಗೆ ಉಳ್ಳಾಲ ತಾಲೂಕು ತಲಪಾಡಿ ಗ್ರಾಮದ ನಾರ್ಲ ಅಜ್ಜನಕಟ್ಟೆ ಸಮೀಪದ ಸಾರ್ವಜನಿಕ ಸ್ಥಳದಲ್ಲಿ ಗಗನ್ ಶೆಟ್ಟಿ (22), ತಂದೆ ನಾಗೇಶ್ ಶೆಟ್ಟಿ, ನಾರ್ಲ ಹೌಸ್, ತಲಪಾಡಿ ಗ್ರಾಮ, ಉಳ್ಳಾಲ ತಾಲೂಕು ನಿವಾಸಿ ಎಂಬಾತನು ಯಾವುದೋ ಮಾದಕ ವಸ್ತು ಸೇವಿಸಿ ಸಾರ್ವಜನಿಕರಿಗೆ ತೊಂದರೆ ಆಗುವ ರೀತಿಯಲ್ಲಿ ವರ್ತಿಸುತ್ತಿದ್ದಾನೆ ಎಂಬ ಮಾಹಿತಿ ಪೊಲೀಸರಿಗೆ ಲಭಿಸಿತು.
ಈ ಕುರಿತು ಉಳ್ಳಾಲ ಪೊಲೀಸ್ ಠಾಣೆಯ ಪಿ.ಎಸ್.ಐ ಸಂತೋಷ ಕುಮಾರ ಡಿ ಅವರು ಸಿಬ್ಬಂದಿಯವರೊಂದಿಗೆ ಸ್ಥಳಕ್ಕೆ ತೆರಳಿ ಆರೋಪಿಯನ್ನು ಪತ್ತೆಹಚ್ಚಿ ವಶಕ್ಕೆ ಪಡೆದರು. ಬಳಿಕ ಆರೋಪಿಯನ್ನು ಕೋಟೆಕಾರು ದೇರಳಕಟ್ಟೆಯ ಕೆ.ಎಸ್. ಹೆಗ್ಡೆ ಆಸ್ಪತ್ರೆ ಮತ್ತು ರಿಸರ್ಚ್ ಸೆಂಟರ್‌ಗೆ ಕರೆದೊಯ್ದು ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಯಿತು.

ವೈದ್ಯಕೀಯ ಪರೀಕ್ಷೆಯ ನಂತರ ಆರೋಪಿಯು ಮಾದಕ ವಸ್ತು ಸೇವಿಸಿರುವುದಾಗಿ ಆಸ್ಪತ್ರೆಯ ವೈದ್ಯಾಧಿಕಾರಿಯವರು ಟೋಕ್ಸಿಕಾಲಜಿ ವಿಶ್ಲೇಷಣೆ ವರದಿ ಮೂಲಕ ದೃಢಪಡಿಸಿದ್ದಾರೆ.

ಈ ಸಂಬಂಧ ಆರೋಪಿಯ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.