Home Karavali Karnataka ಉಡುಪಿ : ಕುಂಬಳೆಯಿಂದ ನಾಪತ್ತೆಯಾಗಿದ್ದ ಪ್ರೇಮಿಗಳ ರಕ್ಷಣೆ…!!

ಉಡುಪಿ : ಕುಂಬಳೆಯಿಂದ ನಾಪತ್ತೆಯಾಗಿದ್ದ ಪ್ರೇಮಿಗಳ ರಕ್ಷಣೆ…!!

ಉಡುಪಿ: ಕುಂಬಳೆಯಿಂದ ನಾಪತ್ತೆಯಾಗಿದ್ದ ಪ್ರೇಮಿಗಳನ್ನು ಇಂದ್ರಾಳಿಯ ರೈಲು ನಿಲ್ದಾಣದಲ್ಲಿ ರಕ್ಷಿಸಲಾಗಿದೆ.

ಅವರ ಪ್ರೀತಿಗೆ ಮನೆಯಲ್ಲಿ ವಿರೋಧ ವ್ಯಕ್ತವಾದ ಕಾರಣ ಮನೆಮಂದಿಗೆ ಸೂಚನೆ ನೀಡದೆ ಮನೆಬಿಟ್ಟು ಹೊರಟಿದ್ದರು. ಮನೆಮಂದಿ ಹುಡುಕಾಟ ನಡೆಸಿದರೂ ಪತ್ತೆಯಾಗದಿರುವುದರಿಂದ ಕುಂಬಳೆ ಪೊಲೀಸ್‌ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು.

ಕೇರಳದಿಂದ ಮುಂಬಯಿಗೆ ತೆರಳುತ್ತಿದ್ದ ರೈಲಿನಲ್ಲಿ ಗಸ್ತು ಕರ್ತವ್ಯದಲ್ಲಿದ್ದ ಆರ್‌ಪಿಎಫ್ ಸುನಿಲ್ ಕೆ.ಸಿ. ಅವರು ಯುವಕ-ಯುವತಿಯ ವರ್ತನೆಯಿಂದ ಅನುಮಾನಗೊಂಡು ವಿಚಾರಿಸಿದಾಗ ಕುಂಬಳೆಯಿಂದ ಬಂದಿರುವುದಾಗಿ ತಿಳಿಸಿದ್ದರು. ಬಳಿಕ ಅವರನ್ನು ಇಂದ್ರಾಳಿಯ ರೈಲು ನಿಲ್ದಾಣದಲ್ಲಿ ಇಳಿಸಿ ಇನ್‌ಸ್ಪೆಕ್ಟರ್ ಮಧುಸೂದನ್ ಅವರಿಗೆ ಹಸ್ತಾಂತರಿಸಲಾಯಿತು. ಪ್ರೇಮಿಗಳ ವಯಸ್ಸಿನಲ್ಲಿ ಅನುಮಾನವಿದ್ದ ಕಾರಣ ಮಕ್ಕಳ ಸಹಾಯವಾಣಿಗೆ ಮಾಹಿತಿ ನೀಡಲಾಗಿದೆ.

ಮಕ್ಕಳ ಸಹಾಯವಾಣಿಯ ಪ್ರಕಾಶ್, ಲಕ್ಷ್ಮೀಕಾಂತ್ ಅವರು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರ ನೆರವು ಪಡೆದು ಪ್ರೇಮಿಗಳನ್ನು ಉಡುಪಿ ನಗರ ಮಹಿಳಾ ಪೊಲೀಸ್‌ ಠಾಣೆಯ ವಶಕ್ಕೆ ಒಪ್ಪಿಸಿದರು. ಅಲ್ಲಿ ವಿಚಾರಿಸಲ್ಪಟ್ಟಾಗ ಕುಂಬಳೆಯಿಂದ ನಾಪತ್ತೆಯಾಗಿದ್ದ ಪ್ರೇಮಿಗಳೆಂದು ದೃಢಪಟ್ಟಿತು. ಬಳಿಕ ಪ್ರೇಮಿಗಳನ್ನು ಕುಂಬಳೆಯ ಪೊಲೀಸರಿ ಒಪ್ಪಿಸಲಾಯಿತು.