Home Crime ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಬಂಧನ…!!

ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಬಂಧನ…!!

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಟ್ವಾಳ ನಗರ ಪೊಲೀಸ್ ಠಾಣಾ ಅ.ಕ್ರ :117/2019 ಹಾಗೂ ಅ.ಕ್ರ :111/2020 ಪ್ರಕರಣಗಳಿಗೆ ಸಂಬಂಧಿಸಿದಂತೆ, ಬಂಟ್ವಾಳ ACJ & JMFC ನ್ಯಾಯಾಲಯಕ್ಕೆ ಹಲವು ಬಾರಿ ಹಾಜರಾಗದೇ ತಪ್ಪಿಸಿಕೊಂಡಿದ್ದ ಬಂಟ್ವಾಳ ವೀರಕಂಬ ನಿವಾಸಿ ಮಹಮ್ಮದ್ ಅಶ್ರಫ್ (38) ಅವರನ್ನು ಬಂಧಿಸಲಾಗಿದೆ.

ಆರೋಪಿತನ ವಿರುದ್ಧ ಈಗಾಗಲೇ 10ಕ್ಕೂ ಹೆಚ್ಚು ಬಾರಿ ವಾರಂಟ್ ಜಾರಿಯಾಗಿದ್ದರೂ, ಆತ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದನು. ಇದೀಗ ಬಂಟ್ವಾಳ ನಗರ ಪೊಲೀಸ್ ಠಾಣೆಯ ASI ಸುಜು ಹಾಗೂ CHC 665 ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.