Home Crime ಕೋಮುದ್ವೇಷ ಪ್ರಚೋದಿಸುವ ವಿಡಿಯೋ ಶೇರ್ ಮಾಡಿದ ಯುವಕ ಅರೆಸ್ಟ್…!!

ಕೋಮುದ್ವೇಷ ಪ್ರಚೋದಿಸುವ ವಿಡಿಯೋ ಶೇರ್ ಮಾಡಿದ ಯುವಕ ಅರೆಸ್ಟ್…!!

ಮಂಗಳೂರು : ಸಾಮಾಜಿಕ ಜಾಲತಾಣದಲ್ಲಿ 2025ರ ಅಕ್ಟೋಬರ್ ತಿಂಗಳಲ್ಲಿ ಫೇಸ್ಬುಕ್ ನಲ್ಲಿ “ನಝೀರ ಮಂಗಳೂರು” ಎಂಬ ಫೇಸ್ ಬುಕ್ ಖಾತೆಯಿಂದ ಎಐ ತಂತ್ರಾಶದಲ್ಲಿ ತಿರುಚಿದ ವಿಡಿಯೋವನ್ನು ಶೇರ್ ಮಾಡಿ ಸಮಾಜದಲ್ಲಿ ಕೋಮುದ್ವೇಷ ಹುಟ್ಟುಹಾಕಲು ಪ್ರಚೋದಿಸಿದ್ದ ಆರೋಪಿಯನ್ನು ಕಂಕನಾಡಿ ನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಡಗಬೆಳ್ಳೂರು ಗ್ರಾಮದ ಕೋಳ್ತಮಜಲು ನಿವಾಸಿ ಮಹಮ್ಮದ್ ರಫೀಕ್ (38) ಎಂಬಾತ “ನಝೀರ ಮಂಗಳೂರು” ಖಾತೆಯಿಂದ ವಿಡಿಯೋ ಶೇರ್ ಮಾಡಿದ್ದು ದೃಢಪಟ್ಟಿತ್ತು. ಈ ಬಗ್ಗೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಕಲಂ; 196, 353(1), 351(2) ಬಿಎನ್ಎಸ್ ಅಡಿಯಲ್ಲಿ ಪ್ರಕರಣ ದಾಖಲಾಗಿ ತನಿಖೆಯಲ್ಲಿರುತ್ತದೆ.

“ನಝೀರ ಮಂಗಳೂರು” ಎಂಬ ಫೇಸ್ ಬುಕ್ ಖಾತೆಯ ಬಗ್ಗೆ ವಿವರಗಳನ್ನು ಪಡೆಯಲಾಗಿದ್ದು, ಆರೋಪಿತನನ್ನು ಮಾರ್ಚ್ 22ರಂದು ಬೆಂಗಳೂರಿನಲ್ಲಿ ಕಂಕನಾಡಿ ನಗರ ಪೊಲೀಸರು ದಸ್ತಗಿರಿ ಮಾಡಿದ್ದಾರೆ. ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿರುತ್ತಾರೆ.