Home Crime ಮನೆಯಿಂದ ಕೆಲಸಕ್ಕೆಂದು ಹೊರಟು ಹೋದ ವ್ಯಕ್ತಿಯೊಬ್ಬರು ಬಾರದೇ ನಾಪತ್ತೆ…!!

ಮನೆಯಿಂದ ಕೆಲಸಕ್ಕೆಂದು ಹೊರಟು ಹೋದ ವ್ಯಕ್ತಿಯೊಬ್ಬರು ಬಾರದೇ ನಾಪತ್ತೆ…!!

ಹಿರಿಯಡ್ಕ: ಉಡುಪಿ ಜಿಲ್ಲೆಯ ಹಿರಿಯಡ್ಕ ಸಮೀಪ ವ್ಯಕ್ತಿಯೊಬ್ಬರು ಮನೆಯಿಂದ ಕೆಲಸಕ್ಕೆ ಹೋದವರು ವಾಪಸ್ಸು ಬಾರದೇ ನಾಪತ್ತೆಯಾದ ಘಟನೆ ನಡೆದಿದೆ.

ನಾಪತ್ತೆಯಾದ ವ್ಯಕ್ತಿ ಹಿರಿಯಡ್ಕದ ಬೊಮ್ಮರಬೆಟ್ಟು ನಿವಾಸಿ ಮಮತ ಅವರ ಗಂಡ ಅರುಣ್ ಎಂದು ತಿಳಿದು ಬಂದಿದೆ.

ಪೊಲೀಸರು ನಾಪತ್ತೆ ಪ್ರಕರಣದ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

ಪ್ರಕರಣ ವಿವರ: ಪಿರ್ಯಾದಿದಾರರಾದ ಮಮತ(41), ಬೊಮ್ಮರಬೆಟ್ಟು ಗ್ರಾಮ, ಉಡುಪಿ ಇವರ ಗಂಡ ಅರುಣ್‌ (54)‌ ಎಂಬುವವರು ದಿನಾಂಕ 02/07/2025 ರಂದು ಬೆಳಿಗ್ಗೆ 8:15 ಗಂಟೆಗೆ ಮನೆಯಿಂದ ಕೆಲಸಕ್ಕೆಂದು ಹೊರಟು ಹೋದವರು ಮನೆಗೂ ಬಾರದೇ, ಕೆಲಸಕ್ಕೂ ಹೋಗದೇ, ಸಂಬಂಧಿಕರ ಮನೆಗೂ ಹೋಗದೇ ಕಾಣೆಯಾಗಿರುವುದಾಗಿದೆ.

ಈ ಬಗ್ಗೆ ಹಿರಿಯಡ್ಕ ಪೊಲೀಸ್‌ ಠಾಣೆ ಅಪರಾಧ ಕ್ರಮಾಂಕ 48/2025 ಕಲಂ: MAN MISSING ರಂತೆ ಪ್ರಕರಣ ದಾಖಲಾಗಿರುತ್ತದೆ .