Home Crime ಬೈಂದೂರು :‌ ಮನೆಯೊಂದರಲ್ಲಿ ಕಾನೂನು ಬಾಹಿರವಾಗಿ ಅನ್ನ ಭಾಗ್ಯ ಅಕ್ಕಿ ದಾಸ್ತಾನು…!!

ಬೈಂದೂರು :‌ ಮನೆಯೊಂದರಲ್ಲಿ ಕಾನೂನು ಬಾಹಿರವಾಗಿ ಅನ್ನ ಭಾಗ್ಯ ಅಕ್ಕಿ ದಾಸ್ತಾನು…!!

ಬೈಂದೂರು: ಉಡುಪಿ ಜಿಲ್ಲೆಯ ಬೈಂದೂರು ಸಮೀಪ  ಮನೆಯೊಂದರಲ್ಲಿ ಅಕ್ರಮವಾಗಿ ಅನ್ನ ಭಾಗ್ಯದ ಅಕ್ಕಿಯ ದಾಸ್ತಾನು ‌ಮಾಡಿರುವ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ.

ಬಿಜೂರು ಗ್ರಾಮದ ಹರಕೇರಿ ನಿವಾಸಿ ಮಜೀದ್ ಎಂಬವರ ಮನೆಗೆ ಪೊಲೀಸರು ದಾಳಿ ನಡೆಸಿ ಅಕ್ಕಿ ಮತ್ತೆ ಗೋಣಿ ಚೀಲಗಳನ್ನು ವಶಪಡಿಸಿಕೊಂಡಿದ್ದಾರೆ.

ಪ್ರಕರಣ ಸಾರಾಂಶ : ಪಿರ್ಯಾದಿದಾರರಾದ ವಿನಯ್‌ ಕುಮಾರ (49), ಆಹಾರ ನಿರೀಕ್ಷಕರು ಬೈಂದೂರು ಇವರಿಗೆ ಬಿಜೂರು ಗ್ರಾಮದ ಹರಕೇರಿ ಎಂಬಲ್ಲಿ ಆರೋಪಿ ಮಜೀದ್‌ ಮನೆಯಲ್ಲಿ ಅಕ್ರಮವಾಗಿ ಉಚಿತ ಅನ್ನ ಭಾಗ್ಯ ಯೋಜನಗೆ ಸಂಬಂಧಿಸಿದ ಅಕ್ಕಿಯನ್ನು ದಾಸ್ತಾನು ಇರಿಸಿರುವ ಬಗ್ಗೆ ಮಾಹಿತಿ ದೊರೆತ ಮೇರೆಗೆ ದಿನಾಂಕ 02/07/2025 ರಂದು ಬೆಳಿಗ್ಗೆ 09:30 ಗಂಟೆಗೆ ದಾಳಿ ನಡೆಸಿ ಆರೋಪಿಯು ಉಚಿತ ಅನ್ನಭಾಗ್ಯ ಯೋಜನೆಗೆ ಸಂಬಂಧಿಸಿದ ಅಕ್ಕಿಯನ್ನು ಕಾನೂನು ಬಾಹಿರವಾಗಿ ಯಾರಿಂದಲೋ ಖರೀದಿಸಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಉದ್ದೇಶದಿಂದ ಆರೋಪಿ ಮಜೀದ್‌ ತನ್ನ ಮನೆಯಲ್ಲಿ ಅಕ್ರಮವಾಗಿ ದಾಸ್ತಾನು ಇರಿಸಿದ ಒಟ್ಟು 21.10 ಕ್ವಿಂಟಾಲ್‌ ತೂಕದ ರೂಪಾಯಿ 71,740/- ಮೌಲ್ಯದ 22 ಪಾಲಿಥಿನ ಚೀಲ ಮತ್ತು 28 ಗೋಣಿ ಚೀಲ ಅಕ್ಕಿ ತುಂಬಿರುವ ಚೀಲಗಳನ್ನು ಸ್ವಾಧೀಪಡಿಸಿಕೊಂಡಿರುವುದಾಗಿದೆ.

ಈ ಬಗ್ಗೆ ಬೈಂದೂರು ಪೊಲೀಸ್‌ ಠಾಣೆ ಅಪರಾಧ ಕ್ರಮಾಂಕ 129/2025 ಕಲಂ: 3, 6, 7 Essential commodities act ರಂತೆ ಪ್ರಕರಣ ದಾಖಲಾಗಿರುತ್ತದೆ.