Home Latest ರಘುಪತಿ ಭಟ್ ಧರಣಿ ಒತ್ತಡಕ್ಕೆ ಮಣಿದ ನಗರಾಭಿವೃದ್ಧಿ ಪ್ರಾಧಿಕಾರ : ನಕ್ಷೆ ಮಂಜೂರು..!!

ರಘುಪತಿ ಭಟ್ ಧರಣಿ ಒತ್ತಡಕ್ಕೆ ಮಣಿದ ನಗರಾಭಿವೃದ್ಧಿ ಪ್ರಾಧಿಕಾರ : ನಕ್ಷೆ ಮಂಜೂರು..!!

ಉಡುಪಿ : ನಗರಾಭಿವೃದ್ಧಿ ಪ್ರಾಧಿಕಾರದ ವಿರುದ್ಧ ಮಾಜಿ ಶಾಸಕ ರಘುಪತಿ ಭಟ್ ಆರಂಭಿಸಿದ್ದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹಕ್ಕೆ ಒಂದೇ ದಿನದಲ್ಲಿ ಫಲ ದೊರೆತಿದ್ದು, ರೆಸಾರ್ಟ್ ನಿರ್ಮಾಣಕ್ಕೆ ಸಂಬಂಧಿಸಿದ ಏಕವಿನ್ಯಾಸ ನಕ್ಷೆಯನ್ನು ಪ್ರಾಧಿಕಾರ ಮಂಜೂರು ಮಾಡಿದೆ.

ಏಕ ವಿನ್ಯಾಸ ನಕ್ಷೆ ಅನುಮೋದನೆಗೆ ವಿಳಂಬವಾಗುತ್ತಿರುವುದನ್ನು ಖಂಡಿಸಿ ಮಾಜಿ ಶಾಸಕ ರಘುಪತಿ ಭಟ್ ಸೋಮವಾರದಿಂದ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಎದುರು ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದ್ದರು.

ಬಡಾನಿಡಿಯೂರು ಗ್ರಾಮದ ಸುಮಾರು 90 ಸೆಂಟ್ಸ್ ಜಾಗದಲ್ಲಿ ರೆಸಾರ್ಟ್ ನಿರ್ಮಿಸುವ ಉದ್ದೇಶದಿಂದ ರಘುಪತಿ ಭಟ್ 2024ರ ಮಾರ್ಚ್ 20ರಂದು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಏಕ ವಿನ್ಯಾಸ ನಕ್ಷೆ ಅನುಮೋದನೆಗಾಗಿ ಅರ್ಜಿ ಸಲ್ಲಿಸಿದ್ದರು. ಆದರೆ ಕಳೆದ ಎರಡು ವರ್ಷಗಳಿಂದ ಯಾವುದೇ ಅನುಮೋದನೆ ನೀಡದೆ ಸತಾಯಿಸಲಾಗುತ್ತಿದೆ ಎಂದು ಆರೋಪಿಸಿ ಅವರು ಸೋಮವಾರ ಬೆಳಿಗ್ಗೆ 9:30ರಿಂದ ಧರಣಿ ಸತ್ಯಾಗ್ರಹ ಆರಂಭಿಸಿದ್ದರು.

ಧರಣಿ ಎರಡನೇ ದಿನಕ್ಕೆ ಕಾಲಿಟ್ಟ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಏಕವಿನ್ಯಾಸ ನಕ್ಷೆ ಮಂಜೂರು ಮಾಡಲಾಗಿದ್ದು, ಧರಣಿಗೆ ಒಂದೇ ದಿನದಲ್ಲಿ ಯಶಸ್ಸು ದೊರೆತಂತಾಗಿದೆ.

ಈ ಹಿನ್ನೆಲೆಯಲ್ಲಿ ಪ್ರಾಧಿಕಾರದ ಕ್ರಮದ ಬಗ್ಗೆ ರಾಜಕೀಯ ವಲಯದಲ್ಲಿಯೂ ಚರ್ಚೆ ಆರಂಭವಾಗಿದೆ.