ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಸಮೀಪ ಯುವತಿಯೋರ್ವಳನ್ನು ಮದುವೆಯಾಗುವುದಾಗಿ ನಂಬಿಸಿ ಆಕೆಯ ಜೊತೆ ದೈಹಿಕ ಸಂಪರ್ಕ ಬೆಳೆಸಿ ಆಕೆಯನ್ನು ಗರ್ಭಿಣಿ ಮಾಡಿ ಮಗು ಕರುಣಿಸಿ ಇದೀಗ ಯುವಕ ಪುತ್ತೂರಿನ ಬಿಜೆಪಿ ಮುಖಂಡ ಜಗನ್ನಿವಾಸ್ ರಾವ್ ಎಂಬವರ ಪುತ್ರ ಕೃಷ್ಣ ಜೆ ರಾವ್ ನಾಪತ್ತೆಯಾಗಿದ್ದ.
ಮಂಗಳೂರಿನ ಎಸ್ಪಿ ಅವರು ತನಿಖೆಯನ್ನು ಚುರುಕು ಗೊಳಿಸಿದ್ದು, ಈಗ ಪೊಲೀಸರ ಶೀಘ್ರ ಕಾರ್ಯಚರಣೆಯಲ್ಲಿ ಆರೋಪಿ ಶ್ರೀಕೃಷ್ಣ ಜೆ.ರಾವ್‌ನ್ನು ಬಂಧಿಸಲಾಗಿದೆ.
ಪುತ್ತೂರಿನಿಂದ ತೆರಳಿರುವ ಪೊಲೀಸರ ತಂಡವೊಂದು ಆರೋಪಿಯನ್ನು ಪತ್ತೆ ಮಾಡಿ ಅಲ್ಲಿಂದ ವಶಕ್ಕೆ ಪಡೆದುಕೊಂಡು ಆಗಮಿಸುತ್ತಿರುವುದಾಗಿ ಮಾಹಿತಿ ಲಭಿಸಿದೆ.