ಬಂಟ್ವಾಳ : ಫರಂಗಿಪೇಟೆಯ ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವನೆ ಮಾಡುತ್ತಿದ್ದ ವ್ಯಕ್ತಿಯನ್ನು ಪ್ರಶ್ನಿಸಿದ ರಾತ್ರಿ ಪಾಳಿಯ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಸಿಬ್ಬಂದಿಗೆ ಹಲ್ಲೆ ನಡೆಸಿದ ವ್ಯಕ್ತಿಯೋರ್ವನನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿ ಫರಂಗಿಪೇಟೆ ನಿವಾಸಿ ಜಾಕೀರ್ ಯಾನೆ ಜಾಕೀರ್ ಹುಸೈನ್ ಎಂದು ತಿಳಿದು ಬಂದಿದೆ.
ಅರುಣ ಚೌವ್ಹಾಣ ಅವರು ಫರಂಗಿಪೇಟೆ ಹೊರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಜೂ. 28ರ ತಡರಾತ್ರಿ 11.30ರ ಸುಮಾರಿಗೆ ತೆರೆದಿದ್ದ ಅಂಗಡಿ, ಹೊಟೇಲ್‌ಗಳನ್ನು ಬಂದ್ ಮಾಡಿಸುತ್ತಿದ್ದ ಸಂದರ್ಭ ಆರೋಪಿಯು ಮದ್ಯ ಸೇವನೆ ಮಾಡುತ್ತಿರುವುದನ್ನು ಪ್ರಶ್ನಿಸಿದಾಗ ಹಲ್ಲೆ ನಡೆಸಿ ಸಿಬ್ಬಂದಿಯ ಸಮವಸ್ತ್ರವನ್ನು ಹರಿದು ಹಾಕಿದ್ದಾನೆ ಎಂದು ಪೊಲೀಸ್ ಸಿಬ್ಬಂದಿ ದೂರಿನಲ್ಲಿ ವಿವರಿಸಿದ್ದಾರೆ.
ಈ ಕುರಿತು ಬಂಟ್ವಾಳ ಗ್ರಾಮಾಂತರ ಪೊಲೀಸರು ಆತನ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಿದ್ದಾರೆ. ಆತನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಲಯವು ಆತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.