ಮಂಗಳೂರು: ಮಂಗಳೂರಿನ ಬರ್ಕೆ ಪೊಲೀಸ್ ಠಾಣೆಯಲ್ಲಿ 2009 ರಲ್ಲಿ ಕಾಪಿರೈಟ್ ಕಾಯ್ದೆಯಡಿ ದಾಖಲಾದ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಉಳ್ಳಾಲ ತಾಲೂಕಿನ ದೇರಳಕಟ್ಟೆಯ ನಾಟೆಕಲ್ ನಿವಾಸಿ ರಿಯಾಜ್ ಎಂಬಾತನನ್ನು ಬಂಧಿಸಲಾಗಿದೆ.
ಬರ್ಕೆ ಪೊಲೀಸ್ ಠಾಣಾ ಅಧಿಕಾರಿ ಮತ್ತು ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಆರೊಪಿಯನ್ನು ಮಾರ್ಚ್ 24 ರಂದು ಪತ್ತೆ ಹಚ್ಚಿ ದಸ್ತಗಿರಿ ಮಾಡಿದ್ದಾರೆ.
ನ್ಯಾಯಾಲಯವು 2016 ರಲ್ಲಿ ಈ ಪ್ರಕರಣವನ್ನು ಎಲ್ ಪಿ ಸಿ ಅಂದರೆ ಲಾಂಗ್ ಪೆಂಡಿಗ್ ಕೇಸ್ ಆಗಿ ಪರಿವರ್ತಿಸಿತ್ತು. ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.





