ಬಂಟ್ವಾಳ : ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶನಿವಾರ ಮಧ್ಯಾಹ್ನ ತುಂಬೆ ಬಳಿ ಸಂಭವಿಸಿದೆ.
ಮೃತರನ್ನು ಪಾವೂರು ನಿವಾಸಿ ನೌಫಲ್ ಎಂದು ಗುರುತಿಸಲಾಗಿದೆ. ಮೂಲಗಳ ಪ್ರಕಾರ, ಅವರು ಬೆಳಿಗ್ಗೆ ಬಿ.ಸಿ. ರೋಡ್ ಕೈಕಂಬ ನಿವಾಸಿ ಉಸ್ಮಾನ್ ಅವರಿಂದ ಖರೀದಿಸಿದ ಸ್ವಿಫ್ಟ್ ಕಾರನ್ನು ಚಾಲನೆ ಮಾಡುತ್ತಿದ್ದಾಗ ಈ ಘಟನೆ ಸಂಭವಿಸಿದೆ.
ಘಟನೆಯ ಕುರಿತು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.