ಉಡುಪಿ : ಸುಮಾರು 10 ವರ್ಷಗಳ ಹಿಂದೆ ಕಾಣೆಯಾಗಿದ್ದ ಮಹಿಳೆಯೊಬ್ಬರನ್ನು ಉಡುಪಿ ನಗರ ಪೊಲೀಸರು ಪತ್ತೆಹಚ್ಚಿದ್ದಾರೆ.
ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ.ಹರಿರಾಂ ಶಂಕರ್ ಐ.ಪಿ.ಎಸ್ ಅವರ ಮಾರ್ಗದರ್ಶನದಲ್ಲಿ ಮಹಿಳಾ ಮಿಸ್ಸಿಂಗ್ ಟಾಸ್ಕ್ ಫೋರ್ಸ್ ಹಾಗೂ ಉಡುಪಿ ನಗರ ಪೊಲೀಸರು ಮಹಿಳೆಯನ್ನು ಪತ್ತೆಹಚ್ಚಿದ್ದಾರೆ.
ಮೂಲತಃ ಹಾಸನ ಜಿಲ್ಲೆಯ ಚನ್ನರಾಯ ಪಟ್ಟಣ ನಿವಾಸಿಯಾಗಿರುವ ಭವಾನಿ ಅವರು ಹುಟ್ಟಿದಾಗಿನಿಂದ ಅನಾಥಾಶ್ರಮದಲ್ಲೇ ವಾಸಿಸುತ್ತಿದ್ದರು. 10 ವರ್ಷದ ಹಿಂದೆ ಅವರು ಏಕಾಏಕಿ ನಾಪತ್ತೆಯಾಗಿದ್ದರು. ಇದೀಗ ಮಹಿಳೆಯನ್ನು ಬೆಂಗಳೂರಿನಲ್ಲಿ ಪತ್ತೆಹಚ್ಚಿ, ಉಡುಪಿಗೆ ಕರೆ ತರಲಾಗಿದೆ.





