ಉಡುಪಿ : ನಗರಸಭೆಯ ಅನುದಾನದಲ್ಲಿ ನಿರ್ಮಾಣಗೊಂಡ ಗೋಪಾಲಪುರ ವಾರ್ಡಿನ ಸಂತೆಕಟ್ಟೆ ಒಣ ಮೀನು ಮಾರುಕಟ್ಟೆಯನ್ನು ಉಡುಪಿ ಶಾಸಕ ಶ್ರೀ ಯಶ್ ಪಾಲ್ ಸುವರ್ಣ ಉದ್ಘಾಟಿಸಿದರು.
ನೂತನ ಮಾರುಕಟ್ಟೆಯ ಉದ್ಘಾಟನೆ ನೆರವೇರಿಸಿ ಮಾತನಾಡಿದ ಶಾಸಕ ಯಶ್ ಪಾಲ್ ಸುವರ್ಣ ಸಂತೆಕಟ್ಟೆಯ ಒಣ ಮೀನು ಮಾರಾಟಗಾರ ಮಹಿಳೆಯರ ಬಹು ವರ್ಷಗಳ ಬೇಡಿಕೆಯಂತೆ ಉಡುಪಿ ನಗರಸಭೆಯ ಮೂಲಕ ₹10 ಲಕ್ಷ ವೆಚ್ಚದಲ್ಲಿ ಸುಸಜ್ಜಿತ ಮಾರುಕಟ್ಟೆ ನಿರ್ಮಿಸಲಾಗಿದ್ದು, ವಿದ್ಯುತ್ ದೀಪ ಹಾಗೂ ಫ್ಯಾನ್ ಅಳವಡಿಕೆಗೆ ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದು, ಉಡುಪಿ ನಗರಸಭಾ ವ್ಯಾಪ್ತಿಯ ಎಲ್ಲಾ ಮೀನು ಮಾರುಕಟ್ಟೆಗಳ ಅಭಿವೃದ್ಧಿಗೆ ವಿಶೇಷ ಮುತುವರ್ಜಿ ವಹಿಸುವುದಾಗಿ ಹೇಳಿದರು.
ಉಡುಪಿ ನಗರಸಭೆ ಅಧ್ಯಕ್ಷರಾದ ಶ್ರೀ ಪ್ರಭಾಕರ ಪೂಜಾರಿ, ನಗರಸಭಾ ಸದಸ್ಯರಾದ ಶ್ರೀಮತಿ ಮಂಜುಳಾ ನಾಯಕ್, ಶ್ರೀ ಬಾಲಕೃಷ್ಣ ಶೆಟ್ಟಿ, ಶ್ರೀಮತಿ ಜಯಂತಿ ಪೂಜಾರಿ, ಹಸಿ ಮೀನು ಮಾರಾಟಗಾರರ ಸಂಘದ ಅಧ್ಯಕ್ಷರಾದ ಶ್ರೀಮತಿ ಬೇಬಿ ಸಾಲ್ಯಾನ್, ಕಲ್ಯಾಣಪುರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ನಾಗರಾಜ ಕುಂದರ್, ಸಹಕಾರಿ ಸಂಘದ ನಿರ್ದೇಶಕರಾದ ಶ್ರೀ ಸುರೇಶ್ ಕುಂದರ್, ಶ್ರೀ ನಾರಾಯಣ, ಮುಖಂಡರಾದ ಶ್ರೀ ಪ್ರಶಾಂತ್ ಕಾಂಚನ್ ಬೆಂಗ್ರೆ, ಶ್ರೀ ಉಮೇಶ್ ಶೆಟ್ಟಿ, ಶ್ರೀ ಸತೀಶ್ ನಾಯ್ಕ್, ಶ್ರೀ ಚಿನ್ಮಯ ಮೂರ್ತಿ, ಶ್ರೀ ಪ್ರಸಾದ್ ರಾವ್, ಶ್ರೀ ಅಜಿತ್ ಕೊಡವೂರು, ಶ್ರೀ ಕೃಷ್ಣ ಶೆಟ್ಟಿ, ಶ್ರೀ ರುಡಾಲ್ಫ್ ಹಾಗೂ ಒಣ ಮೀನು ಮಾರಾಟಗಾರ ಮಹಿಳೆಯರು ಉಪಸ್ಥಿತರಿದ್ದರು.