Home Crime ಆಂಧ್ರಪ್ರದೇಶದಲ್ಲಿ ಭೀಕರ ಬಸ್ ಅಪಘಾತ : ಬೆಂಕಿಗಾಹುತಿಯಾಗಿ 10 ಪ್ರಯಾಣಿಕರ ಸಾವು : ಹಲವರಿಗೆ ಗಂಭೀರ...

ಆಂಧ್ರಪ್ರದೇಶದಲ್ಲಿ ಭೀಕರ ಬಸ್ ಅಪಘಾತ : ಬೆಂಕಿಗಾಹುತಿಯಾಗಿ 10 ಪ್ರಯಾಣಿಕರ ಸಾವು : ಹಲವರಿಗೆ ಗಂಭೀರ ಗಾಯ…!!

​ಮಾರ್ಕಪುರಂ (ಆಂಧ್ರಪ್ರದೇಶ): ರಾಜ್ಯದಲ್ಲಿ ಖಾಸಗಿ ಬಸ್‌ಗಳು ಅಗ್ನಿ ಅವಘಡಕ್ಕೆ ತುತ್ತಾಗುತ್ತಿರುವ ಸರಣಿ ಘಟನೆಗಳು ಮುಂದುವರಿದಿದ್ದು, ಇಂದು ಆಂಧ್ರಪ್ರದೇಶದ ಮಾರ್ಕಪುರಂ ಜಿಲ್ಲೆಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಹತ್ತು ಮಂದಿ ಪ್ರಯಾಣಿಕರು ಬೆಂಕಿಗಾಹುತಿಯಾಗಿದ್ದಾರೆ.

ಆಂಧ್ರ ಪ್ರದೇಶ (ಮಾ.26): ಮತ್ತೊಂದು ಭೀಕರ ಬಸ್ ಅಪಘಾತ (Bus Accident) ಸಂಭವಿಸಿದ್ದು, ಪ್ರಯಾಣಿಕರು ನಿದ್ದೆಯ ಮಂಪರಿನಲ್ಲಿದ್ದಾಗಲೇ ಬಸ್​​ಗೆ ಬೆಂಕಿ ಹೊತ್ತಿಕೊಂಡಿದೆ. ಬೆಳ್ಳ ಬೆಳಗ್ಗೆ ಹರಿಕೃಷ್ಣ ಖಾಸಗಿ ಟ್ರಾವೆಲ್ಸ್ (Private Travels) ಬಸ್, ಲೋಡ್ ಆಗಿದ್ದ ಟಿಪ್ಪರ್‌ಗೆ ಡಿಕ್ಕಿ ಹೊಡೆದಿದ್ದು, ತಕ್ಷಣವೇ ಬಸ್​ಗೆ ಬೆಂಕಿ ಹೊತ್ತಿಕೊಂಡಿದೆ. ಈ ಅಪಘಾತದಲ್ಲಿ (Accident) 10 ಪ್ರಯಾಣಿಕರು ಜೀವಂತ ದಹನವಾಗಿದ್ದಾರೆ ಎಂದು ವರದಿ ಆಗಿದೆ. ಆಂಧ್ರಪ್ರದೇಶದ (Andra Pradesh) ರಾಯಲಸೀಮೆಯ ಮಾರ್ಕಪುರಂ ಜಿಲ್ಲೆಯಲ್ಲಿ ಈ ಭೀಕರ ಬಸ್ ದುರಂತ ಸಂಭವಿಸಿದೆ.
ರಾಯವರಂನ ಹಲಗೆ ಕ್ವಾರಿಯ ಬಳಿ ಬಸ್ ಮತ್ತು ಟಿಪ್ಪರ್  ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬಸ್​​ ಸಂಪೂರ್ಣವಾಗಿ ಸುಟ್ಟುಹೋಗಿದೆ. ಬಸ್‌ನಲ್ಲಿ ಒಟ್ಟು 40 ಪ್ರಯಾಣಿಕರಿದ್ದರು ಎನ್ನಲಾಗ್ತಿದ್ದು, ರಕ್ಷಣಾ ಕಾರ್ಯಚರಣೆಯಲ್ಲಿ ಕೆಲವರು ಬದುಕುಳಿದ್ದು,10 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿ ಆಗಿದೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ

ಬೆಳಿಗ್ಗೆ 5 ಗಂಟೆಯ ಸುಮಾರಿಗೆ ಅಪಘಾತ ಸಂಭವಿಸಿದಾಗ, ಎಲ್ಲಾ ಪ್ರಯಾಣಿಕರು ಗಾಢ ನಿದ್ರೆಯಲ್ಲಿದ್ದರು. ಅಪಘಾತ ಸಂಭವಿಸಿದ ಕೂಡಲೇ ಅನೇಕರಿಗೆ ಏನಾಗುತ್ತಿದೆ ಎಂಬುದರ ಅರಿವಿರಲಿಲ್ಲ. ಬಸ್ಸಿನ ಮುಂಭಾಗದಿಂದ ಬೆಂಕಿ ಕಾಣಿಸಿಕೊಂಡಿದ್ದರಿಂದ, ಪ್ರಯಾಣಿಕರು ತಪ್ಪಿಸಿಕೊಳ್ಳುವುದು ಕಷ್ಟಕರವಾಯ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.


ಸ್ಥಳೀಯರು ಓಡಿ ಬಂದು ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಅನೇಕ ಪ್ರಯಾಣಿಕರನ್ನು ಕಿಟಕಿಗಳಿಂದ ಕೆಳಗೆ ಇಳಿಸಿದ್ರು. ಬಸ್ಸಿನಲ್ಲಿ ಇನ್ನೂ ಕೆಲವು ಶವಗಳು ಇರಬಹುದು ಎಂದು  ಹೇಳಲಾಗ್ತಿದೆ. ಅನೇಕ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಆದ್ದರಿಂದ, ಸಾವಿನ ಸಂಖ್ಯೆ ಹೆಚ್ಚಾಗುವ ನಿರೀಕ್ಷೆಯಿದೆ