ಉಡುಪಿ: ನಗರದಲ್ಲಿ ಎನ್‌ಡಿಪಿಎಸ್ ಪ್ರಕರಣದಲ್ಲಿ 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಕೊನೆಗೂ ಪೊಲೀಸರ ಬಲೆಗೆ ಬಿದ್ದಿದ್ದಾನೆ.
ಆರೋಪಿಯಾಗಿದ್ದ ಮಹಮ್ಮದ್ ಇಕ್ಬಾಲ್ ಎಂಬಾತನು ಸುಮಾರು ಎಂಟು ವರ್ಷಗಳಿಂದ ತಲೆಮರೆಸಿಕೊಂಡಿದ್ದನು.
ಉಡುಪಿ ನಗರ ಠಾಣೆಯ ಹೆಡ್ ಕಾನ್ಸ್ಟೇಬಲ್ 40 ಹಾಗೂ 115ರವರ ತಂಡ ಭಟ್ಕಳದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಪತ್ತೆಹಚ್ಚಿ ಬಂಧಿಸಿದೆ.
ಬಂಧಿತ ಆರೋಪಿಯನ್ನು ಮಾನ್ಯ ಪಿಸಿಜೆ & ಜೆಎಂಎಫ್‌ಸಿ ನ್ಯಾಯಾಲಯ, ಉಡುಪಿ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.





