Home Crime ಬ್ರಹ್ಮಾವರ: ಮಹಿಳೆಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ..!!

ಬ್ರಹ್ಮಾವರ: ಮಹಿಳೆಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ..!!

ಬ್ರಹ್ಮಾವರ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಆರೂರು ಗ್ರಾಮದ ಕುಂಜಾಲು ಅಂಚೆಯ ಮೇಲಡ್ಪು ಪ್ರದೇಶದ ಅಮ್ಮ ನಿಲಯ ನಿವಾಸಿ ಸುಶೀಲಾ ಶೆಟ್ಟಿ (60) ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಎಂದು ಗುರುತಿಸಲಾಗಿದೆ.

ಸುಶೀಲಾ ಶೆಟ್ಟಿ ಅವರು ಕಳೆದ 10ರಿಂದ 15 ವರ್ಷಗಳಿಂದ ಮಾನಸಿಕ ಖಿನ್ನತೆ, ಬಿಪಿ ಹಾಗೂ ಶುಗರ್ ಕಾಯಿಲೆಯಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ.

ಮಾರ್ಚ್ 25ರ ಸಂಜೆ 7 ಗಂಟೆಯಿಂದ ಮಾರ್ಚ್ 26ರ ಬೆಳಿಗ್ಗೆ 6 ಗಂಟೆಯ ಮಧ್ಯದಲ್ಲಿ ತಮ್ಮ ಮನೆಯ ಹಿಂಭಾಗದಲ್ಲಿರುವ ಆವರಣವಿಲ್ಲದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಈ ಕುರಿತು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಕ್ರಮಾಂಕ 20/2026 ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.