ಬೆಂಗಳೂರು: ವಿಶ್ವವಾಣಿ ಪತ್ರಿಕೆಯ ವತಿಯಿಂದ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ‘ಗ್ಲೋಬಲ್ ಅಚೀವರ್ಸ್ ಅವಾರ್ಡ್’ ನೀಡಲಾಗುತ್ತಿದ್ದು ಈ ಬಾರಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರು ಆಯ್ಕೆಯಾಗಿದ್ದಾರೆ.
ರಷ್ಯಾ ರಾಜಧಾನಿ ಮಾಸ್ಕೋದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರಮೋದ್ ಮಧ್ವರಾಜ್ ಅವರು ಪ್ರಶಸ್ತಿ ಸ್ವೀಕರಿಸಲಿದ್ದಾರೆ.
ಪ್ರಮೋದ್ ಮಧ್ವರಾಜ್ ಕಾಂಗ್ರೆಸ್ ಪಕ್ಷದಲ್ಲಿ 2013 ರಿಂದ 2018 ರವರೆಗೆ ಉಡುಪಿ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದರು. 2016ರಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮೀನುಗಾರಿಕಾ ಇಲಾಖೆ ಖಾತೆ ಸಚಿವರಾಗಿ ಉಡುಪಿಯ ಅಭಿವೃದ್ಧಿಗೆ ಶ್ರಮಿಸಿದ್ದರು. ರಾಜಕೀಯ, ಸಾಮಾಜಿಕ, ಧಾರ್ಮಿಕ ಕ್ಷೇತ್ರದಲ್ಲಿ ಸಕ್ರಿಯರಾಗಿರುವ ಪ್ರಮೋದ್ ಮಧ್ವರಾಜ್ ಅವರು ನೊಂದವರ ಪಾಲಿನ ಆಶಾಕಿರಣವಾಗಿದ್ದಾರೆ.