ಉಡುಪಿ : ಶ್ರೀ ಕೃಷ್ಣ ಮಠದ ರಾಜಾಂಗಣ ಯಾತ್ರಿಕರ ವಾಹನ ನಿಲುಗಡೆ ಸ್ಥಳದಲ್ಲಿ ರಾತ್ರಿ ಹಗಲೆನ್ನದೆ ಸಂಚರಿಸುತ್ತಿದ್ದ ಅಪರಿಚಿತ ಮಹಿಳೆಯನ್ನು ರಕ್ಷಿಸಿರುವ ಘಟನೆ ಬುಧವಾರ ನಡೆದಿದೆ.
ರಕ್ಷಿಸಲ್ಪಟ್ಟ ಮಹಿಳೆಯನ್ನು ಗೋವಾ ಮೂಲದ ಪ್ರಿಯಾಂಕ ರಾಮದಾಸ್ ಎಂದು ಗುರುತಿಸಲಾಗಿದೆ.
ಮಹಿಳೆಯ ಅಸಹಾಯಕ ಸ್ಥಿತಿಯನ್ನು ಗಮನಿಸಿದ ಸುನಿಲ್ ಬೈಲಕೆರೆ ಎನ್ನುವವ ರು, ಸಮಾಜಸೇವಕ ನಿತ್ಯಾನಂದ ಒಳಕಾಡುವರ ಗಮನಕ್ಕೆ ತಂದಿದ್ದರು.
ತಕ್ಷಣ ಘಟನಾ ಸ್ಥಳಕ್ಕೆ ಬಂದ ಒಳಕಾಡುವರು ಅಕ್ಕಾ ಪಡೆಗೆ ಮಾಹಿತಿ ಒದಗಿಸಿ, ವಶಕ್ಕೆ ಒಪ್ಪಿಸಿದರು. ಬಳಿಕ ಅಕ್ಕಾ ಪಡೆಯವರು ಮಹಿಳೆಯನ್ನು ಮಹಿಳಾ ಪೊಲೀಸ್ ಠಾಣೆಯ ಸಹಕಾರದಿಂದ ನಿಟ್ಟೂರು ಸಖಿ ಕೇಂದ್ರಕ್ಕೆ ಒಪ್ಪಿಸಿದ್ದಾರೆ.





