Home Crime ತುಂಡಾಗಿ‌ ಬಿದ್ದ ವಯರ್ ತುಳಿದು ವಿದ್ಯುತ್ ಶಾಕ್‍ಗೆ ವ್ಯಕ್ತಿಯೋರ್ವರು ಮೃತ್ಯು…!!

ತುಂಡಾಗಿ‌ ಬಿದ್ದ ವಯರ್ ತುಳಿದು ವಿದ್ಯುತ್ ಶಾಕ್‍ಗೆ ವ್ಯಕ್ತಿಯೋರ್ವರು ಮೃತ್ಯು…!!

ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಸಮೀಪ ಮನೆಗೆ ಹೋಗುವ ದಾರಿಯಲ್ಲಿ ತುಂಡಾಗಿ ಬಿದ್ದ ವಿದ್ಯುತ್ ವಯರ್ ತುಳಿದು ವಿದ್ಯುತ್ ಶಾಕ್‍ಗೆ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಕೊಡಿಯಾಲ ಗ್ರಾಮದ ಕಲ್ಲಪಣೆಯಲ್ಲಿ ಸಂಭವಿಸಿದೆ.

ಕಲ್ಲಪಣೆಯ ದಿವಾಕರ ಆಚಾರ್ಯ (45)ಎಂಬವರು ಮನೆಗೆ ಹೋಗುವ ದಾರಿಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ತಾಗಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಮೃತದೇಹವನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ತಂದು ಪೋಸ್ಟ್ ಮಾರ್ಟಮ್ ನಡೆಸಿ ಮನೆಯವರಿಗೆ ಹಸ್ತಾಂತರ ಮಾಡಲಾಯಿತು