Home Karavali Karnataka ಯುವಕನೋರ್ವ ದಿಢೀರ್ ಕುಸಿದು ಬಿದ್ದು ಮೃತ್ಯು…!!

ಯುವಕನೋರ್ವ ದಿಢೀರ್ ಕುಸಿದು ಬಿದ್ದು ಮೃತ್ಯು…!!

ಉಳ್ಳಾಲ: ದಕ್ಷಿಣ ಕನ್ನಡ ಜಿಲ್ಲೆಯ ‌ಉಳ್ಳಾಲ ಸಮೀಪ ಯುವಕನೋರ್ವ ದಿಢೀರ್ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ. ‌

ಮೃತಪಟ್ಟವರು ಉಳ್ಳಾಲ ಮಂಜನಾಡಿ ಪೆರಡೆ ದಿ. ವೆಂಕಪ್ಪ ಹಾಗೂ ಪಾರ್ವತಿ ದಂಪತಿಯ ಪುತ್ರ ಭರತ್ (32) ಎಂದು ತಿಳಿಯಲಾಗಿದೆ.

ಎರಡು ತಿಂಗಳ ಹಿಂದೆಯಷ್ಟೆ ಮದುವೆಯಾಗಿದ್ದ ಭರತ್
ಟೈಲರಿಂಗ್ ವೃತ್ತಿ ಮಾಡಿಕೊಂಡಿದ್ದ.4 ದಿನದ ಹಿಂದೆ ರಕ್ತದೊತ್ತಡದಿಂದ ಕುಸಿದು ಬಿದ್ದಿದ್ದರು. ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಮೃತಪಟ್ಟಿದ್ದಾರೆ.

ಏಪ್ರಿಲ್ 22ರಂದು ಭರತ್ ವಿವಾಹ ಸಮಾರಂಭ ನಡೆದಿತ್ತು, ಇವರ ಪತ್ನಿ ನಗರದ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಮೃತರು ತಾಯಿ ಹಾಗೂ ಮೂವರು ಸೋದರಿಯರನ್ನು ಅಗಲಿದ್ದಾರೆ.