Home Latest ಸುದ್ದಿಗೋಷ್ಠಿಯಲ್ಲಿ ಮಾತನಾಡಿದವರು ನಮ್ಮ ಸದಸ್ಯರಲ್ಲ : ಕರವೇ ಜಿಲ್ಲಾಧ್ಯಕ್ಷ ಸುಜಯ ಪೂಜಾರಿ

ಸುದ್ದಿಗೋಷ್ಠಿಯಲ್ಲಿ ಮಾತನಾಡಿದವರು ನಮ್ಮ ಸದಸ್ಯರಲ್ಲ : ಕರವೇ ಜಿಲ್ಲಾಧ್ಯಕ್ಷ ಸುಜಯ ಪೂಜಾರಿ

ಉಡುಪಿ: ದಿನಾಂಕ 27-03-2026 ರಂದು ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕೆಲವು ವ್ಯಕ್ತಿಗಳು ಕರ್ನಾಟಕ ರಕ್ಷಣಾ ವೇದಿಕೆ ಮಹಿಳಾ ಘಟಕದ ಹೆಸರಿನಲ್ಲಿ ನೀಡಿರುವ ಹೇಳಿಕೆಗಳು ಸಂಪೂರ್ಣವಾಗಿ ಸಂಘಟನೆಯ ಅಧಿಕೃತ ನಿಲುವಿಗೆ ಸಂಬಂಧಪಟ್ಟದ್ದಲ್ಲ ಎಂದು ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಉಡುಪಿ ಜಿಲ್ಲಾ ಅಧ್ಯಕ್ಷರಾದ ಸುಜಯ ಪೂಜಾರಿ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದವರು ನಮ್ಮ ಸಂಘಟನೆಯ ಸಕ್ರಿಯ ಸದಸ್ಯರು ಅಥವಾ ಪದಾಧಿಕಾರಿಗಳು ಅಲ್ಲ. ಅವರು ವೈಯಕ್ತಿಕ ಕಾರಣಗಳಿಂದ ಸಂಘಟನೆಯಿಂದ ದೂರವಾಗಿರುವವರು. ಅವರ ಹೇಳಿಕೆಗಳನ್ನು ಕರ್ನಾಟಕ ರಕ್ಷಣಾ ವೇದಿಕೆಯ ಅಧಿಕೃತ ನಿಲುವಾಗಿ ಪರಿಗಣಿಸುವುದು ತಪ್ಪಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.
ಯಾವುದೇ ವೈಯಕ್ತಿಕ ಅಸಮಾಧಾನದಿಂದ ಪ್ರೇರಿತವಾಗಿವೆ. ಸಂಘಟನೆಯೊಳಗಿನ ವಿಚಾರಗಳನ್ನು ಸಾರ್ವಜನಿಕ ವೇದಿಕೆಯಲ್ಲಿ ತಪ್ಪಾಗಿ ಪ್ರತಿಬಿಂಬಿಸುವುದು ಸಂಘಟನೆಯ ಗೌರವಕ್ಕೆ ಧಕ್ಕೆ ತರುತ್ತದೆ ಎಂದು ತಿಳಿಸಿದ್ದಾರೆ.

ಕರ್ನಾಟಕ ರಕ್ಷಣಾ ವೇದಿಕೆ ಸದಾ ಕನ್ನಡ ನಾಡು, ನುಡಿ, ಸಂಸ್ಕೃತಿ ರಕ್ಷಣೆಯ ಉದ್ದೇಶದಿಂದ ಕಾರ್ಯನಿರ್ವಹಿಸುತ್ತಿದ್ದು, ಯಾವುದೇ ವ್ಯಕ್ತಿ ಅಥವಾ ಗುಂಪು ಸ್ವಾರ್ಥಪೂರಿತವಾಗಿ ಸಂಘಟನೆಯ ಹೆಸರನ್ನು ದುರುಪಯೋಗಪಡಿಸಿಕೊಳ್ಳಲು ಅವಕಾಶ ನೀಡುವುದಿಲ್ಲ.

ಜಿಲ್ಲಾ ಘಟಕದಲ್ಲಿ ಎಲ್ಲ ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡುತ್ತಿದ್ದು, ಸಂಘಟನೆಯ ಶಕ್ತಿಯನ್ನು ದುರ್ಬಲಗೊಳಿಸಲು ಕೆಲವರು ಮಾಡುತ್ತಿರುವ ಪ್ರಯತ್ನಗಳನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಈ ಕುರಿತು ಮುಂದಿನ ದಿನಗಳಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಸಂಘಟನೆಯ ಎಲ್ಲಾ ಸದಸ್ಯರು ಹಾಗೂ ಸಾರ್ವಜನಿಕರು ಇಂತಹ ತಪ್ಪು ಮಾಹಿತಿಗಳಿಗೆ ಮರುಳಾಗದೆ, ಅಧಿಕೃತ ಮಾಹಿತಿಯನ್ನೇ ನಂಬುವಂತೆ ಕರವೇ ಜಿಲ್ಲಾಧ್ಯಕ್ಷ ಸುಜಯ ಪೂಜಾರಿಯವರು ವಿನಂತಿಸಿದ್ದಾರೆ