ಮಂಗಳೂರು : ಧರ್ಮಸ್ಥಳ ಗ್ರಾಮದಲ್ಲಿ ಹೆಣ ಹೂತು ಹಾಕಿದ ಪ್ರಕರಣ ಸಂಬಂಧ ಮಾಧ್ಯಮಗಳಲ್ಲಿ ಬರುತ್ತಿರುವ ವರದಿಗಳ ಬಗ್ಗೆ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ. ಸ್ಪಷ್ಟನೆ ನೀಡಿದ್ದಾರೆ.
ಈ ಪ್ರಕರಣದ ಬಗ್ಗೆ ಸಾರ್ವಜನಿಕರು ಮತ್ತು ಮಾಧ್ಯಮದ ಜೊತೆ ಹಂಚಿಕೊಳ್ಳುವ ಖಚಿತ ಮಾಹಿತಿಗಳಿದ್ದಲ್ಲಿ ಅಧಿಕೃತವಾಗಿ ತಿಳಿಸಲಾಗುವುದು.
‘ಮೀಡಿಯಾ ಟ್ರಯಲ್’ ಬಗ್ಗೆ ಸುಪ್ರೀಂಕೋರ್ಟ್ ಮತ್ತು ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾದ ಮಾರ್ಗಸೂಚಿಗಳನ್ನು ಮಾಧ್ಯಮದವರು ಪಾಲಿಸಬೇಕು.
ದೂರುದಾರರು ಅಥವಾ ಅವರ ಪರ ಯಾರಾದರೂ ಪೊಲೀಸರ ಬಳಿ ಲಭ್ಯವಿರದ ಮಾಹಿತಿ ಹಂಚಿಕೊಂಡಿದ್ದಲ್ಲಿ ಪೊಲೀಸರಿಂದ ಪ್ರತಿಕ್ರಿಯೆ ನಿರೀಕ್ಷಿಸಬಾರದು ಎಂದು ಸ್ಪಷ್ಟನೆ ನೀಡಿದ್ದಾರೆ.