Home Crime ಮಲ್ಪೆ: ಗಡಿಪಾರು ಆದೇಶ ಜಾರಿ ವೇಳೆ ಕಾರು ಡಿಕ್ಕಿ ಹೊಡೆದು ಆರೋಪಿ ಪರಾರಿ

ಮಲ್ಪೆ: ಗಡಿಪಾರು ಆದೇಶ ಜಾರಿ ವೇಳೆ ಕಾರು ಡಿಕ್ಕಿ ಹೊಡೆದು ಆರೋಪಿ ಪರಾರಿ

ಮಲ್ಪೆ: ಕಾರ್ಕಳ ನಗರ ಠಾಣೆಯ PSI ಶಿವಕುಮಾರ್ ಎಸ್.ಆರ್ ಅವರು ಮಾನ್ಯ ಪೊಲೀಸ್ ಅಧೀಕ್ಷಕರ MAG SR-04/2026 ಆದೇಶದಂತೆ ಮಹಮ್ಮದ್ ಫೈಜಲ್ ಎಂಬಾತನಿಗೆ ಹೊರ ಜಿಲ್ಲೆಗೆ ಗಡಿಪಾರು ಆದೇಶದ ಪ್ರತಿಯನ್ನು ಜಾರಿ ಮಾಡಲು ತೆರಳಿದ್ದ ವೇಳೆ ಅಪಘಾತ ಸಂಭವಿಸಿ ಆರೋಪಿ ಪರಾರಿಯಾದ ಘಟನೆ ನಡೆದಿದೆ.

 

ಉಡುಪಿ ತಾಲೂಕು ಪಡುತೋನ್ಸೆ ಗ್ರಾಮದ ಹೂಡೆ ನಾಗಬ್ರಹ್ಮ ಬಬ್ಬುಸ್ವಾಮಿ ದೈವಸ್ಥಾನದ ಸಮೀಪ ಮಹಮ್ಮದ್ ಫೈಜಲ್ ಇರುವುದನ್ನು ಖಚಿತಪಡಿಸಿಕೊಂಡು ಆದೇಶದ ಪ್ರತಿಯನ್ನು ಜಾರಿ ಮಾಡಲು ಪೊಲೀಸರು ತೆರಳಿದಾಗ, ಆತ ಕುಳಿತಿದ್ದ KA-20 MB-7666 ಸಂಖ್ಯೆಯ ಬಿಳಿ ಕಾರನ್ನು ಏಕಾಏಕಿ ಹಿಮ್ಮುಖವಾಗಿ ಚಲಾಯಿಸಿದ್ದಾನೆ. ಈ ವೇಳೆ ಕಾರು ರಸ್ತೆಯ ಪಕ್ಕದಲ್ಲಿದ್ದ ತೆಂಗಿನ ಮರಕ್ಕೆ ಡಿಕ್ಕಿ ಹೊಡೆದು ಜಖಂಗೊಂಡಿದ್ದು, ಬಳಿಕ ಆತ ಅಲ್ಲಿಂದ ಪರಾರಿಯಾಗಿದ್ದಾನೆ.

 

ಆರೋಪಿಯ ನಿರ್ಲಕ್ಷ್ಯ ಹಾಗೂ ಅಜಾಗರೂಕ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ತಿಳಿದುಬಂದಿದ್ದು, ಈ ಸಂಬಂಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.