ಕೋಲಾರ: ಟೆಂಪೋಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಮೂರು ವರ್ಷದ ಬಾಲಕಿ ಮೃತಪಟ್ಟಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಅಡ್ಡಲ್ ಕೆರೆ ಕಟ್ಟೆ ಬಳಿ ನಡೆದಿದೆ.
ಕ್ರುತ್ಯಾ ರೆಡ್ಡಿ ಮೃತಪಟ್ಟ ಮೂರು ವರ್ಷದ ಬಾಲಕಿ. ಬೆಂಗಳೂರಿಗೆ ತರಕಾರಿ ತಲುಪಿಸುವ ತರಾತುರಿಯಲ್ಲಿ ಟೆಂಪೋವೊಂದು ಬೈಕ್‌ಗೆ ಡಿಕ್ಕಿ ಹೋಡೆದಿದೆ.
ಇದರ ಪರಿಣಾಮ ಬೈಕ್‌ನಲ್ಲಿದ್ದ ಮೂರು ವರ್ಷದ ಬಾಲಕಿ ಸ್ಥಳದಲ್ಲೇ ದಾರುಣ ಅಂತ್ಯಕಂಡಿದ್ದಾಳೆ.
ಚಾಲಕನ ಅತಿವೇಗವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಬೈಕ್‌ನಲ್ಲಿದ್ದ ಇತರೆ ಇಬ್ಬರು ಯುವಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಶ್ರೀನಿವಾಸಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಈ ಘಟನೆ ಕುರಿತು ರಾಯಲ್ಪಾಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.





