ಕಾಪು : ನಿವೃತ್ತ ಯೋಧ ಕಟಪಾಡಿ ನಿವಾಸಿ ಶೇಕ್ ಇಬ್ರಾಹಿಂ (85) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ಸ್ವಗೃಹದಲ್ಲಿ ನಿಧನರಾದರು.
ಭಾರತೀಯ ಸೈನ್ಯದಲ್ಲಿ ಹಲವು ವರ್ಷಗಳ ಕಾಲ ಯೋಧರಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿದ್ದು, ಬಳಿಕ ಬ್ಯಾಂಕ್ ಉದ್ಯೋಗಿಯಾಗಿ ಕಾರ್ಯನಿರ್ವಹಿಸಿದ್ದರು.
ಕಟಪಾಡಿ ಜುಮಾ ಮಸೀದಿ ಅಧ್ಯಕ್ಷರಾಗಿ ಹಾಗೂ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿದ್ದರು.
ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.