Home Karavali Karnataka ಉಡುಪಿ: ಪಕ್ಷ ವಿರೋಧಿ ಚಟುವಟಿಕೆ : ಬಿಜೆಪಿಯಿಂದ ಇಬ್ಬರ ಉಚ್ಚಾಟನೆ…!!

ಉಡುಪಿ: ಪಕ್ಷ ವಿರೋಧಿ ಚಟುವಟಿಕೆ : ಬಿಜೆಪಿಯಿಂದ ಇಬ್ಬರ ಉಚ್ಚಾಟನೆ…!!

ಉಡುಪಿ: ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ(ಕೆಎಂಎಫ್) ಚುನಾವಣೆಯಲ್ಲಿ ಪಕ್ಷದ ತೀರ್ಮಾನಕ್ಕೆ ವಿರುದ್ಧವಾಗಿ ಸ್ಪರ್ಧಿಸಿರುತ್ತಿರುವ ಇಬ್ಬರನ್ನು ಜಿಲ್ಲಾ ಬಿಜೆಪಿ ಮುಂದಿನ 6 ವರ್ಷಗಳಿಗೆ ಅನ್ವಯವಾಗುವಂತೆ ಉಚ್ಛಾಟನೆ ಮಾಡಿದೆ.

ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಕಾರ್ಕಳದ ಉದಯ ಕೋಟ್ಯಾನ್‌ ಹಾಗೂ ಜಿಲ್ಲಾ ರೈತ ಮೋರ್ಚಾದ ಅಧ್ಯಕ್ಷ ಪೇತ್ರಿ ಕನ್ನಾರು ಕಮಲಾಕ್ಷ ಹೆಬ್ಬಾರ್‌ ಅವರು ಕೆಎಂಎಫ್ ಚುನಾವಣೆಯಲ್ಲಿ ಪಕ್ಷದ ತೀರ್ಮಾನಕ್ಕೆ ವಿರುದ್ಧವಾಗಿ ಸ್ಪರ್ಧೆ ಮಾಡುತ್ತಿರುವುದರಿಂದ ತತ್‌ಕ್ಷಣದಿಂದ ಜಾರಿಗೆ ಬರುವಂತೆ ಅವರನ್ನು ಮುಂದಿನ 6 ವರ್ಷಗಳ ಕಾಲ ಪಕ್ಷದಿಂ ಉಚ್ಚಾಟಿಸಲಾಗಿದೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಕಿಶೋರ್‌ ಕುಮಾರ್‌ ಕುಂದಾಪುರ ತಿಳಿಸಿದ್ದಾರೆ.