ಮಂಗಳೂರು : ಧರ್ಮಸ್ಥಳ ಗ್ರಾಮದಲ್ಲಿ ಹೆಣ ಹೂಳಿದ ಪ್ರಕರಣದ ಬೆಳವಣಿಗೆ ಬಗ್ಗೆ ಪೊಲೀಸರು ಪ್ರಕಟಣೆ ನೀಡಿದ್ದು, ಸಾಕ್ಷಿ ದೂರುದಾರರು ಸ್ವತಃ ತಾವೇ ಹೊರತೆಗೆದಿರುವುದಾಗಿ ತಿಳಿಸಿರುವ ಅಸ್ಥಿಪಂಜರದ ಅವಶೇಷವನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.
ಜಿಲ್ಲೆಯ ಸಕ್ಷಮ ಪ್ರಾಧಿಕಾರ ಸಾಕ್ಷಿಯ ರಕ್ಷಣೆಗೆ ಜು.10ರ ಸಂಜೆ ತಕ್ಷಣದಿಂದಲೇ ಜಾರಿಗೆ ಬರುವಂತೆ ಅನುಮೋದನೆ ನೀಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಸ್‌ಪಿ ಡಾ.ಅರುಣ್ ಕೆ. ತಿಳಿಸಿದ್ದಾರೆ.