ಬ್ರಹ್ಮಾವರ: ಉಡುಪಿ ಜಿಲ್ಲೆಯ ಬ್ರಹ್ಮಾವರ ಸಮೀಪ ವ್ಯಕ್ತಿಯೊಬ್ಬರು ಮನೆಯಿಂದ ಕೆಲಸಕ್ಕೆ ಹೋದವರು ಬಾರದೇ ನಾಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ.
ಕಾಣೆಯಾದವರು ಪೆರ್ಡೂರು ನಿವಾಸಿ ಯಶೋಧ ಬಾಯಿ ಅವರ ಗಂಡ ಸುರೇಂದ್ರ ಎಂದು ಗುರುತಿಸಲಾಗಿದೆ.
ಪ್ರಕರಣದ ವಿವರ : ಪಿರ್ಯಾದಿದಾರರಾದ ಯಶೋಧ ಬಾಯಿ (35) ಪೆರ್ಡೂರು ಇವರು ತನ್ನ ಗಂಡ ಸುರೇಂದ್ರ (36) ಹಾಗೂ ಇಬ್ಬರೂ ಮಕ್ಕಳೊಂದಿಗೆ ವಾಸವಾಗಿದ್ದು, ದಿನಾಂಕ 28/06/2025 ರಂದು ಬೆಳಿಗ್ಗೆ 06:30 ಗಂಟೆಗೆ ಫಿರ್ಯಾದಿದಾರರ ಗಂಡ ಸುರೇಂದ್ರ ರವರು ಕೂಲಿ ಕೆಲಸಕ್ಕೆಂದು ಮನೆಯಿಂದ ಹೋದವರು ಇದುವರೆಗೂ ಮನೆಗೆ ಬಾರದೇ ಕಾಣೆಯಾಗಿರುವುದಾಗಿದೆ.
ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 152/2025 ಕಲಂ: ಮನುಷ್ಯ ಕಾಣೆಯಂತೆ ಪ್ರಕರಣ ದಾಖಲಾಗಿರುತ್ತದೆ.