Home Crime ಧರ್ಮಸ್ಥಳ : ಸುಳ್ಳು ಮಾಹಿತಿ ಆರೋಪ : ಯೂಟ್ಯೂಬರ್‌ ಸಮೀರ್ ಎಂ.ಡಿ ವಿರುದ್ಧ ಪ್ರಕರಣ ದಾಖಲು…!!

ಧರ್ಮಸ್ಥಳ : ಸುಳ್ಳು ಮಾಹಿತಿ ಆರೋಪ : ಯೂಟ್ಯೂಬರ್‌ ಸಮೀರ್ ಎಂ.ಡಿ ವಿರುದ್ಧ ಪ್ರಕರಣ ದಾಖಲು…!!

ಧರ್ಮಸ್ಥಳ: ಧರ್ಮಸ್ಥಳದಲ್ಲಿ ನಡೆದಿದೆ ಎಂದು ಆರೋಪಿಸಲಾಗುತ್ತಿರುವ ಸರಣಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಸುಳ್ಳು ಮಾಹಿತಿಗಳನ್ನು ಪ್ರಸಾರ ಮಾಡಿದ್ದಾರೆ ಎಂಬ ಆರೋಪದಲ್ಲಿ ಯೂಟ್ಯೂಬರ್ ಸಮೀರ್ ಎಂ.ಡಿ. ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣದ ದೂರುದಾರರು ನೂರಾರು ಮೃತದೇಹಗಳನ್ನು ಬಲವಂತವಾಗಿ ಹೂತು ಹಾಕಿದ್ದೇನೆಂದು ನ್ಯಾಯಾಲಯದ ಮುಂದೆ ಹೇಳಿಕೆ ನೀಡಿದ್ದರು.

ಇದರ ಬೆನ್ನಲ್ಲೇ ಸಮೀರ್ ಎಂ.ಡಿ. ತನ್ನ ಯೂಟ್ಯೂಬ್ ಚಾನೆಲ್‌ನಲ್ಲಿ ಒಟ್ಟು ಪ್ರಕರಣದ ಬಗ್ಗೆ ಕೃತಕ ಬುದ್ಧಿಮತ್ತೆ (AI) ರಚಿತ ಮತ್ತು ಸುಳ್ಳು ಮಾಹಿತಿಗಳನ್ನು ಒಳಗೊಂಡ ವಿಡಿಯೋವನ್ನು ಪ್ರಸಾರ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಾರ್ವಜನಿಕರನ್ನು ಉದ್ದೇಶಪೂರ್ವಕವಾಗಿ ಪ್ರಚೋದಿಸುವ ಉದ್ದೇಶದಿಂದ ಈ ವಿಡಿಯೋ ಪ್ರಸಾರ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.