Home Crime ಅಬ್ದುಲ್ ರಹ್ಮಾನ್ ಹತ್ಯೆ ಪ್ರಕರಣ : ಮತ್ತೋರ್ವ ಆರೋಪಿ ಅರೆಸ್ಟ್…!!

ಅಬ್ದುಲ್ ರಹ್ಮಾನ್ ಹತ್ಯೆ ಪ್ರಕರಣ : ಮತ್ತೋರ್ವ ಆರೋಪಿ ಅರೆಸ್ಟ್…!!

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ಈರಾಕೋಡಿ ಎಂಬಲ್ಲಿ ಮೇ 27ರಂದು ನಡೆದ ಪಿಕ್‌ಅಪ್ ಚಾಲಕ ಕೊಳತ್ತಮಜಲಿನ ಅಬ್ದುಲ್ ರಹ್ಮಾನ್ ಹತ್ಯೆ ಮತ್ತು ಖಲಂದರ್ ಶಾಫಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಮತ್ತೋರ್ವನನ್ನು ಬಂಧಿಸಿದ್ದಾರೆ ಎಂದು ಮಾಹಿತಿ ತಿಳಿಯಲಾಗಿದೆ.

ಬಂಧಿತ ಆರೋಪಿ ಬಂಟ್ವಾಳ ಪುದು ಗ್ರಾಮದ ನಿವಾಸಿ ಪ್ರದೀಪ್ (34) ಎಂದು ಗುರುತಿಸಲಾಗಿದೆ.

ಪ್ರಕರಣದ ತನಿಖೆ ಪ್ರಗತಿಯಲ್ಲಿದ್ದು, ಈವರೆಗೆ 9 ಮಂದಿಯನ್ನು ಬಂಧಿಸಲಾಗಿದೆ. ಪೊಲೀಸರು ಬಂಧಿತ ಆರೋಪಿಯನ್ನು ವಿಚಾರಣೆ ನಡೆಸುತ್ತಿದ್ದಾರೆ.