ಮೂಡುಬಿದ್ರೆ : ಮೂಡುಬಿದ್ರೆ ಪೊಲೀಸ್ ಠಾಣಾ ವ್ಯಾಪ್ತಿಯ ಇರುವೈಲ್ ಗ್ರಾಮದಲ್ಲಿ ಇಸ್ಪೀಟ್ ಜುಗಾರಿ ಅಡ್ಡೆಗೆ ದಾಳಿ ನಡೆಸಿದ ಪೊಲೀಸರು ಹಲವರನ್ನು ಬಂಧಿಸಿದ ಘಟನೆ ಜು. 12ರ ರಾತ್ರಿ ನಡೆದಿದೆ.
ಮೂಡಬಿದ್ರೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅವರು ರೌಂಡ್ಸ್ ಕರ್ತವ್ಯದಲ್ಲಿರುವಾಗ ಮೂಡಬಿದ್ರೆ ತಾಲೂಕಿನ ಇರುವೈಲ್ ಗ್ರಾಮದ ಕೋರಿಬೆಟ್ಟು ಬಳಿ ಗುಡ್ಡೆಯಲ್ಲಿ ಕೆಲವು ವ್ಯಕ್ತಿಗಳು ಸೇರಿ ಹಣವನ್ನು ಪಣವಾಗಿಟ್ಟು ಇಸ್ಪೀಟ್ ಜುಗಾರಿ ನಡೆಸುತ್ತಿದ್ದಾರೆ ಎಂಬುದಾಗಿ ಖಚಿತ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಅಲ್ಲಿಗೆ ದಾಳಿ ನಡೆಸಿದ ಅವರು, ಅಕ್ಬರ್, ಸಂತೋಷ್, ಪ್ರಶಾಂತ್, ಮಹಾಬಲ ಪೂಜಾರಿ, ಪ್ರಜ್ವಲ್, ಗಿರೀಶ್, ರಾಜೇಶ ಎಂಬವರುಗಳನ್ನು ವಶಕ್ಕೆ ಪಡೆದುಕೊಂಡುಕೊಂಡಿದ್ದಾರೆ. ಗಣೇಶ, ಶ್ರೀನಾಥ್, ದಿನೇಶ್ ಕೆಂಪುಗುಡ್ಡೆ, ಕೇಶವ ಯಾನೆ ಅಪ್ಪು ಹಾಗೂ ಇನ್ನಿತರರು ಅದೇ ಸಂದರ್ಭದಲ್ಲಿ ಘಟನಾ ಸ್ಥಳದಿಂದ ಓಡಿ ತಪ್ಪಿಸಿಕೊಂಡಿದ್ದಾರೆ ಎನ್ನಲಾಗಿದೆ.
ಆಪಾಧಿತರ ವಶದಲ್ಲಿದ್ದ ನಗದು ಹಣ 10,100 ರೂ., 52 ಇಸ್ಪೀಟ್ ಎಲೆಗಳು, 2 ಮೇಣದ ಬತ್ತಿ ಹಾಗೂ KA-09-EP-8948 ಮತ್ತು KA-19-EZ-1077 ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಐ.ಪಿ.ಎಸ್ ರವರ ಆದೇಶದಂತೆ ಹಾಗೂ ಉಪ ಪೊಲೀಸ್ ಆಯುಕ್ತ ಸಿದ್ದಾರ್ಥ ಗೋಯಲ್ ಐ.ಪಿ.ಸಿ (ಕಾ ಮತ್ತು ಸು) ಮತ್ತು ರವಿಶಂಕರ (ಅ ಮತ್ತು ಸ) ರವರ ಹಾಗೂ ಉತ್ತರ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಶ್ರೀಕಾಂತ್ ರವರ ನಿರ್ದೇಶನದಂತೆ ಆರೋಪಿಗಳ ಪತ್ತೆ ಕಾರ್ಯದಲ್ಲಿ ಮೂಡಬಿದ್ರೆ ಠಾಣಾ ಪೊಲೀಸ್ ನಿರೀಕ್ಷಕರಾದ ಸಂದೇಶ್ ಪಿ.ಜಿ. ಮತ್ತು ಸಿಬ್ಬಂದಿಗಳಾದ ರಾಜೇಶ, ನಾಗರಾಜ್, ಸುರೇಶ್, ವೆಂಕಟೇಶ್ ಚಂದ್ರಶೇಖರ ಮತ್ತು ಚಾಲಕ ಉಮೇಶ್‌ರವರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.