Home Crime ಮಂಗಳೂರು: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ…!!

ಮಂಗಳೂರು: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ…!!

ಮಂಗಳೂರು : ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳ್ಳತನ ಪ್ರಕರಣವೊಂದಕ್ಕೆ ಸಂಬಂಧಿಸಿ ಕಳೆದ 8 ವರ್ಷಗಳಿಂದ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕೇರಳ ಪಲಕ್ಕಾಡ್ ನಿವಾಸಿ ಶಕೀಲ್ ಪಿ.(43) ಬಂಧಿತ ಆರೋಪಿ. ಆತನನ್ನು ಮಾ. 27ರಂದು ಬಂಟ್ವಾಳ ಗ್ರಾಮಾಂತರ ಠಾಣಾ ಸಿಬಂದಿ ಸಂತೋಷ್ ಹಾಗೂ ಶಿವಾನಂದ ಮಡ್ಡಿ ಅವರು ಕೇರಳ ತಿರೂರಿನಲ್ಲಿ ಬಂಧಿಸಿ ಬಂಟ್ವಾಳ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.